ಬೆಂಗಳೂರು: ಇಂದು ಕರ್ನಾಟಕದಲ್ಲಿ 746 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 765 ಜನ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಕೇವಲ 3 ಮಂದಿ ಸಾವನ್ನಪ್ಪಿದ್ದಾರೆ.ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9,29,552ಕ್ಕೆ ಏರಿಕೆ ಆಗಿದೆ. ಈ ಪೈಕಿ 9,08,494 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 8,887 ಸಕ್ರಿಯ ಪ್ರಕರಣಗಳಿವೆ.ಒಟ್ಟು ಇಲ್ಲಿಯವರೆಗೆ 12,152 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 193 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇಂದು 6,923 ಆಂಟಿಜನ್ ಟೆಸ್ಟ್, 1,06,592 ಆರ್‍ಟಿ ಪಿಸಿಆರ್ ಸೇರಿದಂತೆ ಒಟ್ಟು 1,13,515 ಪರೀಕ್ಷೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ 426, ಚಿಕ್ಕಬಳ್ಳಾಪುರ 39 ಹಾಗೂ ಮೈಸೂರಿನಲ್ಲಿ 31  ಮಂದಿಗೆ ಸೋಂಕು ಬಂದಿದೆ.ಐಸಿಯುನಲ್ಲಿ ಒಟ್ಟು 193 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರು ನಗರದಲ್ಲಿ 87, ಕಲಬುರಗಿ 15, ತುಮಕೂರು ಹಾಗೂ ಹಾಸನದಲ್ಲಿ 10 ಮಂದಿ ಐಸಿಯುನಲ್ಲಿದ್ದಾರೆ.Sign in to your account
Username or Email Address


Password

 Remember Me


