ಹಾಸನ: ಕೊರೊನಾ ಸೋಂಕು ತಗುಲಿ ಜಿಲ್ಲೆಯ ಉಪನ್ಯಾಸಕರೊಬ್ಬರು ಸಾವನ್ನಪ್ಪಿದ್ದು, ಇದರಿಂದಾಗಿ ಜಿಲ್ಲೆಯ ಶಿಕ್ಷಕ ಹಾಗೂ ಉಪನ್ಯಾಸಕರಲ್ಲಿ ಆತಂಕ ಹೆಚ್ಚಿದೆ.ಜಿಲ್ಲೆಯ ಚನ್ನರಾಯಪಟ್ಟಣದ ಸರ್ಕಾರಿ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಜಯಂತ್‍ಕುಮಾರ್.ಬಿಬಿ ಅವರು ಕೊರೊನಾದಿಂದ ಮೃತಪಟ್ಟಿದ್ದಾರೆ. ಡಿಸೆಂಬರ್ 4, 2020 ರಂದು ಕಾಲೇಜಿನಿಂದ ಚುನಾವಣಾ ಕೆಲಸಕ್ಕೆ ನಿಯೋಜನೆಗೊಂಡಿದ್ದರು. ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಕೆಲಸಕ್ಕೆ ಹಾಜರಾಗಿದ್ದರು. ಕರ್ತವ್ಯದ ವೇಳೆಯೇ ಕೊರೊನಾ ಸೋಂಕು ತಗುಲಿತ್ತು ಎನ್ನಲಾಗಿದೆ.ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಲತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಉಪನ್ಯಾಸಕನ ಸಾವಿನಿಂದಾಗಿ ಜಿಲ್ಲೆಯ ಶಿಕ್ಷಕರು ಹಾಗೂ ಉಪನ್ಯಾಸಕರಲ್ಲಿ ಆತಂಕ ಹೆಚ್ಚಿದೆ.Sign in to your account
Username or Email Address


Password

 Remember Me


