ಬಾಗಲಕೋಟೆ: ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಸಚಿವ ಸ್ಥಾನ ವಂಚಿತರು ಬಹಿರಂಗವಾಗಿಯೇ ಸಿಎಂ ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಇದೀಗ ತೆರದಾಳ ಕ್ಷೇತ್ರದ ಶಾಸಕ ಸಿದ್ದು ಸವದಿ ಸಹ ಸೋಶಿಯಲ್ ಮೀಡಿಯಾದಲ್ಲಿ ಹೌದಪ್ಪಗಳಿಗೆ ಪಟ್ಟ ಕಟ್ಟುವ ಚಾಳಿ ಬೆಳೆಯುತ್ತಿದೆ ಎಂದು ಬರೆದುಕೊಂಡಿದ್ದಾರೆ.ಸಿದ್ದು ಸವದಿ ಪೋಸ್ಟ್: ಹಿರಿತನ, ಪಕ್ಷ ನಿಷ್ಠೆ, ಸಿದ್ಧಾಂತಕ್ಕೆ ಬದ್ಧರಾಗಿ ಪ್ರಾಣ ಹೋದರು ಪಕ್ಷಕ್ಕೆ ದ್ರೋಹ ಮಾಡದೇ ಪಕ್ಷಕ್ಕಾಗಿ ಮತ್ತು ಪಕ್ಷದ ಬಲವರ್ಧನೆಗಾಗಿ ಹಗಲು ರಾತ್ರಿ ದುಡಿಯುತ್ತಿದ್ದೇವೆ. ಯಾವುದೇ ಗಾಡ್ ಫಾದರ್ ಬೆಂಬಲವಿಲ್ಲದೆ ಪಕ್ಷವನ್ನು ಎಲ್ಲಾ ಹಂತದಲ್ಲಿ ಅಧಿಕಾರಕ್ಕೆ ತರುವ ಪಕ್ಷದ ಆದೇಶಗಳನ್ನು ಮನಸಾ ಪೂರ್ವಕ ಪಾಲನೆ ಮಾಡುವ ಮತ್ತು ಪಕ್ಷಕ್ಕಾಗಿ ಯಾವತ್ಯಾಗಕ್ಕೂ ಸಿದ್ಧರಿರುವವರಿಗೆ ಯಾವುದೇ ಸ್ಥಾನಮಾನ ಕೊಡುತ್ತಿಲ್ಲ.ಕೇವಲ #ಹೌದಪ್ಪ ಗಳಿಗೆ ಈ ದಿನಗಳಲ್ಲಿ ಪಟ್ಟ ಕಟ್ಟುವ ಚಾಳಿ ಬೆಳೆಯುತ್ತಿದ್ದನು ನೋಡಿ ನೋವಾಗುತ್ತಿದೆ. ಇದು ನಮ್ಮ ದೌರ್ಬಲ್ಯ ಅಂತ ಭಾವಿಸಬಾರದು. ಹೊತ್ತು ಬಂದಂತೆ ಕೊಡೆ ಹಿಡಿಯುವವರಿಗೆ ಮಣೆ ಹಾಕುವುದನ್ನು ಬಿಟ್ಟು ಸ್ವಲ್ಪ ಪಕ್ಷ ನಿಷ್ಟರನ್ನು ಸಹಿತ ಪರಿಗಣಿಸಿದರೆ ನಿಮಗೂ ಗೌರವ ಮತ್ತು ಪಕ್ಷಕ್ಕೂ ಒಳ್ಳೆಯದಾಗುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಿ ಕೊನೆಗೆ ಜೈ ಬಿಜೆಪಿ ಅಂತ ಹೇಳಿದ್ದಾರೆ.Sign in to your account
Username or Email Address


Password

 Remember Me


