ಉಡುಪಿ: ಖಾಸಗಿ ಬಸ್ ಸಿಬ್ಬಂದಿ ರಾಡ್ ಹಿಡಿದು ಹೆದ್ದಾರಿಯಲ್ಲಿ ಜಗಳವಾಡಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿ ನಡೆದಿದೆ.ಪ್ರಯಾಣಿಕರನ್ನು ಬಸ್ ಗೆ ಹತ್ತಿಸುವ ವಿಚಾರದಲ್ಲಿ ಎರಡು ಖಾಸಗಿ ಬಸ್ಸಿನ ಸಿಬ್ಬಂದಿ ನಡುವೆ ಜಟಾಪಟಿ ನಡೆದಿದೆ. ಕೋಹಿನೂರ್ ಬಸ್ ಚಾಲಕ ಸಫಿಯುಲ್ಲಾ, ಎಕೆಎಂಎಸ್ ಬಸ್ ಚಾಲಕ ಇರ್ಷಾದ್ ನಿರ್ವಾಹಕ ಪವನ್ ಶೆಟ್ಟಿ ನಡುವೆ ಗಲಾಟೆ ನಡೆದಿದೆ. ಈ ಘಟನೆ ಉಡುಪಿ ಜಿಲ್ಲೆ ಕಾಪು ತಾಲೂಕಿ ರಾಷ್ಟ್ರೀಯ ಹೆದ್ದಾರಿ 66ಯಲ್ಲಿ ನಡೆದಿದೆ.ಖಾಸಗಿ ಬಸ್ ಸಿಬ್ಬಂದಿ ಜಗಳವನ್ನ ಪ್ರಯಾಣಿಕರ ಮೊಬೈಲಿನಲ್ಲಿ ಸೆರೆಯಾಗಿದೆ. ಪ್ರಯಾಣಿಕರು ಬಸ್ಸಲ್ಲಿ ಇರುವಾಗಲೇ ಈ ಘಟನೆ ನಡೆದಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ಅಜಾಗರೂಕತೆಯಿಂದ ಅತಿ ವೇಗದಲ್ಲಿ ಎರಡೂ ಬಸ್ ಗಳನ್ನು ಚಲಾಯಿಸಲಾಗಿದೆ. ಬಸ್ ಓವರ್ ಟೇಕ್ ಮಾಡಿ ಅಡ್ಡಗಟ್ಟಿ ಬಸ್ ನ ಸಿಬ್ಬಂದಿ ರಾಡ್ ಹಿಡಿದು ಗೂಂಡಾಗಿರಿ ಮಾಡಿದ್ದಾರೆ.ನಾಲ್ವರು ಬಸ್ ಸಿಬ್ಬಂದಿ ಗೂಂಡಾ ವರ್ತನೆಯಿಂದ ಬಸ್‍ನಲ್ಲಿದ್ದ ಪ್ರಯಾಣಿಕರು ಕಂಗಾಲಾಗಿದ್ದಾರೆ. ಘಟನೆ ನಂತರ ಸಾಮಾಜಿಕ ಜಾಲತಾಣದಲ್ಲಿ ಈ ಘಟನೆಯ ಕುರಿತು ಆಕ್ರೋಶ ವ್ಯಕ್ತವಾಗಿದೆ. ಸಾರಿಗೆ ಹಾಗೂ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳುವಂತೆ ಅಗ್ರಹಿಸಿದ್ದಾರೆ. ಕಾಪು ಠಾಣೆಯಲ್ಲಿ ದೂರು ದೂರು ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


