ಬೆಂಗಳೂರು: ಇಂದು ಕರ್ನಾಟಕದಲ್ಲಿ 751 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 1,183 ಜನ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 5 ಮಂದಿ ಸಾವನ್ನಪ್ಪಿದ್ದಾರೆ.ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9,28,806ಕ್ಕೆ ಏರಿಕೆ ಆಗಿದೆ. ಈ ಪೈಕಿ 9,07,729 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 8,909 ಸಕ್ರಿಯ ಪ್ರಕರಣಗಳಿವೆ. ಒಟ್ಟು ಇಲ್ಲಿಯವರೆಗೆ 12,149 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 203 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇಂದು 11,051 ಆಂಟಿಜನ್ ಟೆಸ್ಟ್, 99,162 ಆರ್ ಟಿ ಪಿಸಿಆರ್ ಸೇರಿದಂತೆ ಒಟ್ಟು 1,10,213 ಪರೀಕ್ಷೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ 284, ಚಿಕ್ಕಬಳ್ಳಾಪುರ 53, ಮೈಸೂರು 35, ದಕ್ಷಿಣ ಕನ್ನಡ 24, ಹಾಸನ 32 ಕಲಬುರಗಿ ಹಾಗೂ ತುಮಕೂರಿನಲ್ಲಿ ತಲಾ 20 ಮಂದಿಗೆ ಸೋಂಕು ಬಂದಿದೆ.ಐಸಿಯುನಲ್ಲಿ ಒಟ್ಟು 203 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರು ನಗರದಲ್ಲಿ 87, ಕಲಬುರಗಿ 19, ತುಮಕೂರಿನಲ್ಲಿ 10 ಮಂದಿ ಐಸಿಯುನಲ್ಲಿದ್ದಾರೆ.Sign in to your account
Username or Email Address


Password

 Remember Me


