ಬೆಂಗಳೂರು: ಇಂದು ಕರ್ನಾಟಕದಲ್ಲಿ 496 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 797 ಜನ ಡಿಸ್ಚಾರ್ಜ್‌ ಆಗಿದ್ದಾರೆ. 4 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,28,055ಕ್ಕೆ ಏರಿಕೆ ಆಗಿದೆ. ಈ ಪೈಕಿ 9,06,548 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 9,344 ಸಕ್ರಿಯ ಪ್ರಕರಣಗಳಿವೆ.ಒಟ್ಟು ಇಲ್ಲಿಯವರೆಗೆ 12,144 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 196 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. .ಇಂದು 2,956 ಆಂಟಿಜನ್‌ ಟೆಸ್ಟ್‌, 83,947 ಆರ್‌ಟಿ ಪಿಸಿಆರ್‌ ಸೇರಿದಂತೆ ಒಟ್ಟು 86,903 ಪರೀಕ್ಷೆ ಮಾಡಲಾಗಿದೆ.ಎಂದಿನಂತೆ ಬೆಂಗಳೂರು ನಗರದಲ್ಲಿ 282 ಮಂದಿಗೆ ಸೋಂಕು ಬಂದಿದೆ. ಮೈಸೂರು 36, ಹಾಸನ 16, ಕಲಬುರಗಿಯಲ್ಲಿ 14 ಮಂದಿಗೆ ಸೋಂಕು ಬಂದಿದೆ. ಒಟ್ಟು 196 ಮಂದಿ ಐಸಿಯುನಲ್ಲಿದ್ದು, ಬೆಂಗಳೂರಿನಲ್ಲಿ 82, ಕಲಬುರಗಿ 19, ಹಾಸನ 9 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.Sign in to your account
Username or Email Address


Password

 Remember Me


