ಬಳ್ಳಾರಿ: ನನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಾನು ಈಗಲೂ ಸಿದ್ಧ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವಾಕಾಂಕ್ಷಿಗಳ ಸಂಖ್ಯೆ ಹೆಚ್ಚು ಇತ್ತಂದ್ರೆ ನನ್ನ ಸಚಿವ ಸ್ಥಾನ ತ್ಯಾಗಕ್ಕೆ ನಾನು ಸಿದ್ಧ. ಈ ಹಿಂದೆ ಹೇಳಿದಂತೆ ನಾನು ಸಚಿವ ಸ್ಥಾನದ ತ್ಯಾಗಕ್ಕೆ ಸದಾ ಸಿದ್ಧನಿರುವೆ ಎಂದು ಹೇಳಿದ್ದಾರೆ.ಮುಖ್ಯಮಂತ್ರಿ ಬಿಎಸ್‍ವೈ ಅವರು ಈಗಾಗಲೇ ಸರ್ಕಾರ ರಚನೆ ಮಾಡಲು ಕಾರಣಿಕರ್ತರಾದ ನಮಗೆಲ್ಲ ಸಚಿವ ಸ್ಥಾನ ನೀಡಿದ್ದಾರೆ. ಇನ್ನುಳಿದವರಿಗೂ ಸಚಿವ ಸ್ಥಾನ ನೀಡುವ ವಿಶ್ವಾಸ ಇದೆ. ಸಿಎಂ ಯಡಿಯೂರಪ್ಪ ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ನಮ್ಮ ವಿಜಯನಗರ ಜಿಲ್ಲೆ ರಚನೆ ವಿಚಾರದಲ್ಲಿಯೂ ಕೊಟ್ಟ ಮಾತು ಈಡೇರಿಸಿದ್ದಾರೆ. ಸಚಿವಾಕಾಂಕ್ಷಿಗಳ ಸಂಖ್ಯೆ ಹೆಚ್ಚು ಇತ್ತಂದ್ರೆ ನನ್ನ ಸಚಿವ ಸ್ಥಾನ ತ್ಯಾಗಕ್ಕೆ ನಾನು ಸಿದ್ಧ ಎಂದಿದ್ದೆ, ನಾನು ಈಗಲೂ ಆ ಮಾತಿಗೆ ಬದ್ಧನಾಗಿದ್ದೇನೆ ಎಂದ ಆನಂದ್ ಸಿಂಗ್ ಹೇಳಿದ್ದಾರೆ.ನನಗೆ ಜಿಲ್ಲಾ ವಿಭಜನೆ ಮಾಡುವುದು ಮುಖ್ಯ ನನ್ನ ಬೇಡಿಕೆಯನ್ನು ಸಿಎಂ ಈಡೇರಿಸಿದ್ದಾರೆ. ಹೀಗಾಗಿ ಅವರು ಕೇಳಿದ್ರೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವೆ ಎಂದು ಮತ್ತೊಮ್ಮೆ ಹೇಳಿದ್ದಾರೆ.






 Advertisement 




Sign in to your account
Username or Email Address


Password

 Remember Me


