ಬೆಂಗಳೂರು: ಇಂದು ಕರ್ನಾಟಕದಲ್ಲಿ 792 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 593 ಜನ ಡಿಸ್ಚಾರ್ಜ್‌ ಆಗಿದ್ದಾರೆ. ಇಬ್ಬರು ಸಾವನ್ನಪ್ಪಿದ್ದಾರೆ. ಇಂದು ಬೆಂಗಳೂರಿನಲ್ಲಿ ಯಾರೊಬ್ಬರು ಕೊರೊನಾಗೆ ಬಲಿಯಾಗಿಲ್ಲ.ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,27, 559ಕ್ಕೆ ಏರಿಕೆ ಆಗಿದೆ. ಈ ಪೈಕಿ 9,05,751 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 9,649 ಸಕ್ರಿಯ ಪ್ರಕರಣಗಳಿವೆ.ಒಟ್ಟು ಇಲ್ಲಿಯವರೆಗೆ 12,140 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 202 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಮೈಸೂರು ಮತ್ತು ತುಮಕೂರಿನಲ್ಲಿ ಒಬ್ಬರು ಬಲಿಯಾಗಿದ್ದಾರೆ.ಇಂದು 4,680 ಆಂಟಿಜನ್‌ ಟೆಸ್ಟ್‌, 1,08,526 ಆರ್‌ಟಿ ಪಿಸಿಆರ್‌ ಸೇರಿದಂತೆ ಒಟ್ಟು 1,13,206 ಪರೀಕ್ಷೆ ಮಾಡಲಾಗಿದೆ.ಎಂದಿನಂತೆ ಬೆಂಗಳೂರು ನಗರದಲ್ಲಿ 453 ಮಂದಿಗೆ ಸೋಂಕು ಬಂದಿದೆ. ಮೈಸೂರು 38, ದಕ್ಷಿಣ ಕನ್ನಡ 32, ತುಮಕೂರಿನಲ್ಲಿ 29 ಮಂದಿಗೆ ಸೋಂಕು ಬಂದಿದೆ.ಒಟ್ಟು 202 ಮಂದಿ ಐಸಿಯುನಲ್ಲಿದ್ದು, ಬೆಂಗಳೂರಿನಲ್ಲಿ 85, ಕಲಬುರಗಿ 15, ಹಾಸನ 10 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.Sign in to your account
Username or Email Address


Password

 Remember Me


