ವಿಜಯಪುರ: ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಶಾಸಕ ಎಂ.ಸಿ.ಮನಗೂಳಿ ಆರೋಗ್ಯ ಸಮಸ್ಯೆ ಹಿನ್ನೆಲೆ ಬೆಂಗಳೂರಿನ ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಕಲಬುರಗಿಯಿಂದ ಏರ್ ಲಿಫ್ಟ್ ಮೂಲಕ ಬೆಂಗಳೂರಿಗೆ ಕರೆದೊಯ್ದು ಕುಟುಂಬದವರು ಚಿಕಿತ್ಸೆ ಕೊಡಿಸುತ್ತಿದ್ದಾರೆತೀವ್ರತರವಾದ ಕಫ ಕಟ್ಟಿದ ಹಿನ್ನೆಲೆ ಉಸಿರಾಟದ ಸಮಸ್ಯೆಯಾಗಿ ಅಸ್ವಸ್ಥರಾಗಿದ್ದರು ಎಂದು ತಿಳಿದು ಬಂದಿದೆ. ಸದ್ಯ ಚಿಕಿತ್ಸೆ ಮುಂದುವರಿದಿದ್ದು, ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.ಕ್ಷೇತ್ರದ ಜನರು, ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಎಂ.ಸಿಮನಗೂಳಿ ಅವರ ಪುತ್ರ ಶಾಂತವೀರ ಮನಗೂಳಿ ಹೇಳಿದ್ದಾರೆ.Sign in to your account
Username or Email Address


Password

 Remember Me


