ಬೆಂಗಳೂರು: ಹೈಕೋರ್ಟ್ (High Court) ತೀರ್ಪಿನ ಹಿನ್ನೆಲೆ ಮುಖ್ಯಮಂತ್ರಿಯವರಿಗೆ (Siddaramaiah) ರಾಜೀನಾಮೆ ಕೊಡುವುದೊಂದೇ ದಾರಿ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ (CT Ravi) ಹೇಳಿದ್ದಾರೆ.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಭ್ರಷ್ಟಾಚಾರದ ವಿರುದ್ಧ ಬಿಜೆಪಿ (BJP) ನಡೆಸಿದ ಹೋರಾಟಕ್ಕೆ ಜಯ ಲಭಿಸಿದೆ. ‘ಸತ್ಯಮೇವ ಜಯತೇ’ ಎಂದು ನುಡಿದರು. ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಟ್ಟಿದ್ದೇ ಸಂವಿಧಾನಬಾಹಿರ, ಅಪರಾಧ ಎಂದು ಆರೋಪಿಸಿದ ಕಾಂಗ್ರೆಸ್ಸಿಗರು, ಸಾರ್ವಜನಿಕವಾಗಿ ಕ್ಷಮೆ ಯಾಚನೆ ಮಾಡಬೇಕು. ಒಂದು ಸಾಂವಿಧಾನಿಕ ಹುದ್ದೆಯನ್ನು ಅಗೌರವಿಸಿದ ಕಾರಣಕ್ಕೋಸ್ಕರ ಸಾರ್ವಜನಿಕ ಕ್ಷಮೆಯಾಚನೆ ಮಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಬಿಜೆಪಿ ಸರ್ಕಾರಗಳನ್ನೇ ಸಂಪೂರ್ಣ ವಿಸರ್ಜನೆ ಮಾಡಬೇಕು – ಈಶ್ವರ್ ಖಂಡ್ರೆ ಕಿಡಿಮುಖ್ಯಮಂತ್ರಿಗಳಿಗೆ ಬೇರೆ ದಾರಿ ಉಳಿದಿಲ್ಲ. ಅವರು ಕಾನೂನು ಪಂಡಿತರು. ಸಿಂಪಲ್ ಚೀಫ್ ಮಿನಿಸ್ಟರ್, ಕಾಸ್ಟ್ಲಿ ಲಾಯರನ್ನು ಕರೆಸಿ ವಾದ ಮಂಡಿಸಿದ್ದರು. ಸಿಎಂ ನೋಡೋಕೆ ಸಿಂಪಲ್. ಆದರೆ ಬಂದ ಲಾಯರ್‌ಗಳೆಲ್ಲರೂ ಕಾಸ್ಟ್ಲಿ. ಅವರೆಲ್ಲರೂ ವಾದ ಮಾಡಿದ್ದರೂ ಸತ್ಯವನ್ನು ಮುಚ್ಚಿಡಲು ಸಾಧ್ಯವಾಗಿಲ್ಲ. ಇನ್ನೆಲ್ಲಿಗೆ ಹೋದರೂ ಸತ್ಯ ಮುಚ್ಚಿಡಲು ಸಾಧ್ಯವಿಲ್ಲ. ಸುಳ್ಳು ಗೆಲ್ಲುವುದಿಲ್ಲ. ಸುಳ್ಳು ಹಿಡಿದುಕೊಂಡು ಹೋದರೆ ನಗೆಪಾಟಲಿಗೆ ಈಡಾಗುತ್ತೀರಿ ಎಂದು ಎಚ್ಚರಿಸಿದರು. ಇದನ್ನೂ ಓದಿ: ಆಪ್ತರ ಮಾತು ಕೇಳಿ ಸಿಎಂ ಕೆಟ್ಟರು, ಸತ್ಯಕ್ಕೆ ಜಯ ಸಿಕ್ಕಿದೆ : ಶಾಸಕ ಶ್ರೀವತ್ಸನೀವೂ ಸತ್ಯಕ್ಕೆ ಜೈ ಎನ್ನಿ. ರಾಜೀನಾಮೆ ಕೊಡುವುದೊಂದೇ ನಿಮಗಿರುವ ದಾರಿ. ಸಿದ್ದರಾಮಯ್ಯನವರೇ ಇದಕ್ಕಿಂತ ಜಾಸ್ತಿ ಭಂಡತನ ಮಾಡದಿರಿ. ಈಗ ಮಾಡಿದ್ದೇ ಜಾಸ್ತಿ ಭಂಡತನ. ಇನ್ನೂ ಭಂಡತನ. ರಾಜೀನಾಮೆ ಕೊಟ್ಟು ಕರ್ನಾಟಕದ ಘನತೆಯನ್ನು ಎತ್ತಿ ಹಿಡಿಯಿರಿ ಎಂದು ತಿಳಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯಗೆ ಗಣೇಶನ ಶಾಪ ತಟ್ಟಿದೆ: ಆರ್.ಅಶೋಕ್ನೀವು ಎಸಿಬಿ ಮೂಲಕ ಸಾಕಷ್ಟು ಕೇಸುಗಳನ್ನು ಮುಚ್ಚಿ ಹಾಕಿದ್ದೀರಿ. ಭ್ರಷ್ಟಾಚಾರ ಪ್ರಕರಣ ಬಂದ ಕಾರಣ ಲೋಕಾಯುಕ್ತವನ್ನೂ ದುರ್ಬಲಗೊಳಿಸಿದ್ದೀರಿ. ಬಳಿಕ ಎಸಿಬಿ ಮೂಲಕ ಕ್ಲೀನ್‌ಚಿಟ್ ಕೊಡುವ ಕೆಲಸ ಮಾಡಿದ್ದೀರಿ. ಎಲ್ಲಾ ಕಾಲದಲ್ಲೂ ಇದು ನಡೆಯದೆಂಬ ಸತ್ಯ ನಿಮಗೆ ಅರಿವಾಗಿದೆ. ಸಿದ್ದರಾಮಯ್ಯನವರೇ ನೀವು ನ್ಯಾಯಾಲಯದ ತೀರ್ಪನ್ನು ಗೌರವಿಸಿ. ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: MUDA Scam| ರಾಜಭವನದ ದುರ್ಬಳಕೆಯಾಗಿದೆ, ನಾನು ಯಾವುದೇ ತನಿಖೆಗೆ ಹಿಂಜರಿಯಲ್ಲ – ಸಿಎಂ ಮೊದಲ ಪ್ರತಿಕ್ರಿಯೆ






 Advertisement 




Sign in to your account
Username or Email Address


Password

 Remember Me


