ಬೆಂಗಳೂರು: ಉತ್ತರ ಭಾರತೀಯರು (North Indians) ಬೆಂಗಳೂರು (Bengaluru) ತೊರೆದರೆ ಬೆಂಗಳೂರು ಖಾಲಿಯಾಗುತ್ತದೆ ಎಂದು ಇನ್‌ಸ್ಟಾ ರೀಲ್ಸ್ ಮೂಲಕ ದುರಹಂಕಾರ ಪ್ರದರ್ಶಿಸಿದ ಉತ್ತರ ಭಾರತ ಮೂಲದ ರೀಲ್ಸ್ ರಾಣಿ ಸುಗಂಧಾ ಶರ್ಮಾಗೆ ಇದೀಗ ಕನ್ನಡಿಗರ ತಾಕತ್ತು ಅರ್ಥವಾಗಿದೆ. ಆಕೆ ಮಾಡುವ ಕಂಪನಿಯೇ ನಡತೆಡಯನ್ನು ಗಮನಿಸಿ ಕೆಲಸದಿಂದ ಕಿತ್ತು ಹಾಕಿದೆ.ಕೆಲ ದಿನಗಳ ಹಿಂದೆ ರೀಲ್ಸ್ ಮಾಡಿದ್ದ ಶರ್ಮಾ ಉತ್ತರ ಭಾರತೀಯರು ಬೆಂಗಳೂರನ್ನು ಬಿಟ್ಟು ಹೊರಟರೆ ಬೆಂಗಳೂರು ಖಾಲಿ ಖಾಲಿಯಾಗುತ್ತೆ ಎಂದು ಕನ್ನಡಿಗರನ್ನು ಕೆಣಕಿದ್ದಳು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೇ ಕನ್ನಡಿಗರು ಶರ್ಮಾಗೆ ಬೆಂಗಳೂರನ್ನು ತೊರೆಯುವಂತೆ ಓಪನ್ ಆಗಿಯೇ ಚಾಲೆಂಜ್ ಹಾಕಿದ್ದರು. ಆದರೆ ಅವರ ಚಾಲೆಂಜ್ ಪರಿಣಾಮದಿಂದ ಸ್ವತಃ ಅವರೇ ಕೆಲಸ ಕಳೆದುಕೊಳ್ಳುವಂತಾಗಿದೆ. ಇದನ್ನೂ ಓದಿ: ನ್ಯೂಯಾರ್ಕ್‌ನಲ್ಲಿ ಝೆಲೆನ್ಸ್ಕಿ ಭೇಟಿಯಾದ ಮೋದಿ – ಶಾಂತಿಮಂತ್ರ ಪಠಿಸಿದ ಪ್ರಧಾನಿಶರ್ಮಾ ರೀಲ್ಸ್‌ನಲ್ಲಿ ನೀವು ಹೊರಟು ಹೋಗಿ ಎನ್ನುತ್ತಿದ್ದೀರಾ. ನಿಜವಾಗಿಯು ನಾವೆಲ್ಲರೂ ಬೆಂಗಳೂರು ತೊರೆದರೆ ನಿಮ್ಮ ನಗರ ಖಾಲಿಯಾಗುತ್ತದೆ. ನಿಮ್ಮ ಪಿಜಿಗಳು ಖಾಲಿ ಆಗುತ್ತವೆ. ನಿಮಗೆ ಹಣ ಸಂಪಾದನೆಯಾಗುವುದಿಲ್ಲ. ಕೋರಮಂಗಲದ (Koramangala) ಎಲ್ಲ ಕ್ಲಬ್‌ಗಳು ಖಾಲಿಯಾಗುತ್ತವೆ. ಪಂಜಾಬಿ ಸಂಗೀತಕ್ಕೆ ಕುಣಿಯುವ ಚೆಂದದ ಹುಡುಗಿಯರು ಕಾಣಿಸುವುದಿಲ್ಲ. ಯೋಚಿಸಿ ಮಾತನಾಡಿ. ಉತ್ತರ ಭಾರತೀಯರು ತೊರೆಯಬೇಕು ಎನ್ನುವ ನಿಮ್ಮ ಆಸೆ ನಿಜವಾದರೆ ಬೆಂಗಳೂರಿನ ಕಳೆಯೇ ಹೋಗಿಬಿಡುತ್ತದೆ ಎಂದು ರೀಲ್ಸ್‌ನಲ್ಲಿ ಹೇಳಿದ್ದರು.  ಇದನ್ನೂ ಓದಿ: ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಪ್ರಸಾದದಲ್ಲಿ ಗುಟ್ಕಾ ಪತ್ತೆ – ಭಕ್ತೆಯಿಂದ ಆರೋಪ!ಕೆಲವೇ ಗಂಟೆಗಳಲ್ಲಿ ಈ ವಿಡಿಯೊ ವೈರಲ್ ಆಗಿದ್ದು, ಸುಗಂಧಾ ವಿರುದ್ಧ ಸೆಲೆಬ್ರಿಟಿಗಳು ಸೇರಿದಂತೆ ಅನೇಕರು ಕಿಡಿ ಕಾರಿದ್ದರು. ಭಾಷೆ ನೆಪದಲ್ಲಿ ಜನರ ನಡುವೆ ಕಂದಕ ಸೃಷ್ಟಿಸಲು ಯತ್ನಿಸುತ್ತಿರುವ ಈಕೆಯ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಪೊಲೀಸರಿಗೂ ಟ್ಯಾಗ್ ಮಾಡಿದ್ದರು.ಈಕೆಯ ವೀಡಿಯೋ ನೋಡಿ ಕೆರಳಿದ್ದ ಕನ್ನಡ ಸಂಘಟನೆಯ ರೂಪೇಶ್ ರಾಜಣ್ಣ (Roopesh Rajanna), ಯುವತಿ ಕೆಲಸ ಮಾಡುವ ಕಂಪನಿಗೆ ಹೋಗಿ ವಿಚಾರಿಸಿದ್ದಾರೆ. ಈ ವೇಳೆ ಕಂಪನಿಯೇ ಕೆಲಸದಿಂದ ತೆಗೆದು ಹಾಕಿರೋದು ಬಯಲಿಗೆ ಬಂದಿದೆ. ಸದ್ಯ ಮತ್ತೊಂದು ಖಾಸಗಿ ಕಂಪನಿಯಲ್ಲಿ ಆಕೆ ಕೆಲಸ ಮಾಡುತ್ತಿದ್ದಾರೆ ಅನ್ನೋ ವಿಷ್ಯ ಗೊತ್ತಾಗಿದೆ. ಆ ಕಂಪನಿಗೂ ಭೇಟಿ ನೀಡಿ ಕೆಲಸದಿಂದ ತೆಗದುಹಾಕುವಂತೆ ಮನವಿ ಮಾಡಲಿದ್ದೇವೆ ಎಂದು ಕನ್ನಡ ಹೋರಾಟಗಾರ ರೂಪೇಶ್ ರಾಜಣ್ಣ ಎಚ್ಚರಿಸಿದ್ದಾರೆ.  ಇದನ್ನೂ ಓದಿ: ನನ್ನ ಮಗ ಪಟಾಕಿ ಹಾರಿಸಲು ಹೆದರುತ್ತಿದ್ದ, ಗುಂಡು ಹಾರಿಸಲು ಸಾಧ್ಯವೇ – ಮೃತ ರೇಪ್ ಆರೋಪಿಯ ತಾಯಿ ಕಣ್ಣೀರುSign in to your account
Username or Email Address


Password

 Remember Me


