ಧಾರವಾಡ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್‍ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಹಿಂಡಲಗಾ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ಜನವರಿ 22ರವರೆಗೆ ವಿಸ್ತರಣೆ ಮಾಡಿ ಕೋರ್ಟ್ ಆದೇಶಿಸಿದೆ.ಇಂದು ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನೆಲೆ ಧಾರವಾಡ ಸಿಬಿಐ ವಿಶೇಷ ನ್ಯಾಯಾಲಯ ಮತ್ತೇ ಬಂಧನದ ಅವಧಿ ವಿಸ್ತರಣೆ ಮಾಡಿ ಆದೇಶಿಸಿದೆ. ವಿನಯ್ ಕುಲಕರ್ಣಿ ಕಳೆದ 2 ತಿಂಗಳಿಂದ ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದು, ಮಾಜಿ ಸಚಿವರ ಪರ ವಕೀಲರು ಈಗಾಗಲೇ ಜಾಮೀನಿಗಾಗಿ ಧಾರವಾಡ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.ವಿನಯ್ ಕುಲಕರ್ಣಿ ಸೋದರ ಮಾವ ಚಂದ್ರಶೇಖರ್ ಇಂಡಿ ನ್ಯಾಯಾಂಗ ಬಂಧನ ಕೂಡಾ ಜನವರಿ 22ರವರೆಗೆ ವಿಸ್ತರಣೆ ಮಾಡಿ ಸಿಬಿಐ ನ್ಯಾಯಾಲಯ ಆದೇಶ ಮಾಡಿದೆ. ಚಂದ್ರಶೇಖರ್ ಇಂಡಿ ಅಕ್ರಮ ಶಸ್ತ್ರಾಸ್ತ್ರ ಪೂರೈಕೆ ಪ್ರಕರಣದಲ್ಲಿ ಧಾರವಾಡ ಜೈಲಿನಲ್ಲಿದ್ದಾರೆ.Sign in to your account
Username or Email Address


Password

 Remember Me


