ಬೆಂಗಳೂರು: ಇಂದು ಕರ್ನಾಟಕದಲ್ಲಿ 970 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 657 ಜನ ಡಿಸ್ಚಾರ್ಜ್‌ ಆಗಿದ್ದಾರೆ. ಒಟ್ಟು 3 ಮಂದಿ ಸಾವನ್ನಪ್ಪಿದ್ದಾರೆ.ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9,25,868ಕ್ಕೆ ಏರಿಕೆ ಆಗಿದೆ. ಈ ಪೈಕಿ 9,04,286 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 9,429 ಸಕ್ರಿಯ ಪ್ರಕರಣಗಳಿವೆ.ಒಟ್ಟು ಇಲ್ಲಿಯವರೆಗೆ 12,134 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 203 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇಂದು 10,377 ಆಂಟಿಜನ್‌ ಟೆಸ್ಟ್‌, 1,22,140 ಆರ್‌ಟಿ ಪಿಸಿಆರ್‌ ಸೇರಿದಂತೆ ಒಟ್ಟು 1,32,517 ಪರೀಕ್ಷೆ ಮಾಡಲಾಗಿದೆ. ಎಂದಿನಂತೆ ಬೆಂಗಳೂರು ನಗರದಲ್ಲಿ 479 ಮಂದಿಗೆ ಸೋಂಕು ಬಂದಿದ್ದು ಇಬ್ಬರು ಮೃತಪಟ್ಟಿದ್ದಾರೆ. ಉಳಿದಂತೆ ದಕ್ಷಿಣ ಕನ್ನಡ 62, ಮೈಸೂರು 45, ತುಮಕೂರು 39 ಮಂದಿಗೆ ಸೋಂಕು ಬಂದಿದೆ.ಐಸಿಯುನಲ್ಲಿಒಟ್ಟು 203 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರು ನಗರದಲ್ಲಿ 88, ಕಲಬುರಗಿಯಲ್ಲಿ 14, ತುಮಕೂರಿನಲ್ಲಿ 13 ಮಂದಿ ಇದ್ದಾರೆ.Sign in to your account
Username or Email Address


Password

 Remember Me


