ಮಂಗಳೂರು: ಹಾಡಿಗೂ ಸೈ ಎನ್ನುವ ಮೂಲಕ ನಗರ ಪೊಲೀಸ್ ಕಮಿಷನರ್ ಇದೀಗ ಸುದ್ದಿಯಾಗಿದ್ದಾರೆ.ಹೌದು. ಕಮಿಷನರ್ ಶಶಿಕುಮಾರ್ ಅವರು ಮಂಗಳೂರಿನ ಪಾಂಡೇಶ್ವರದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತಿಗೀತೆ ಹಾಡಿದ್ದಾರೆ. ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಭಾಗಿಯಾಗಿರುವ ಪೊಲೀಸ್ ಕಮಿಷನರ್ ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆಯಲ್ಲಿ ಭಕ್ತಿಗೀತೆ ಹಾಡುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ.ಖಡಕ್ ಆಫೀಸರ್ ಆಗಿ ಛಾಪು ಮೂಡಿಸಿರುವ ಶಶಿಕುಮಾರ್, ಸದಭಿರುಚಿಯ ಆಸಕ್ತಿಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ನಗರದಲ್ಲಿ ಎರಡು ದಿನಗಳ ಕಾಲ ಬೀಚ್, ಮೈದಾನ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿರುವವರು, ಅನಾಮಿಕರ ವಿರುದ್ಧ ಕಾರ್ಯಾಚರಣೆ ನಡೆಸಿದ್ದರು. ಕಮಿಷನರ್ ಕಾರ್ಯಾಚರಣೆಗೆ ಸಾರ್ವಜನಿಕರ ಶ್ಲಾಘನೆ ಕೂಡ ವ್ಯಕ್ತವಾಗಿತ್ತು.


 Advertisement 







 Advertisement 




Sign in to your account
Username or Email Address


Password

 Remember Me


