ಚಾಮರಾಜನಗರ: ರಸ್ತೆ ಬದಿಯಲ್ಲಿದ್ದ ಹಳ್ಳಕ್ಕೆ ಟೆಂಪೋ ಟ್ರಾವೆಲರ್ ಮಗುಚಿ ಬಿದ್ದ ಪರಿಣಾಮ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಚಾಮರಾಜನಗರ ತಾಲೂಕು ಸುವರ್ಣಾವತಿ ಸಮೀಪ ನಡೆದಿದೆ.ರಾಷ್ಟ್ರೀಯ ಹೆದ್ದಾರಿ 209 ರ ಗುಡಿ ಬೋರೆ ಎಂಬಲ್ಲಿ ಅಪಘಾತ ಸಂಭವಿಸಿದೆ. ಟಿಟಿ ತಮಿಳುನಾಡಿನ ತಿರುಪುರ್ ನಿಂದ ಮೈಸೂರಿಗೆ ಬರುತ್ತಿತ್ತು. ಮೈಸೂರಿಗೆ ಚಾಮುಂಡಿ ತಾಯಿ ದರ್ಶನಕ್ಕೆ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ರೆ 11 ಮಂದಿ ಗಾಯಗೊಂಡಿದ್ದಾರೆ. ಕೂಡಲೇ ಗಾಯಾಳುಗಳನ್ನು ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಚಾಮರಾಜನಗರ ಪೊಲೀಸರು ಮೃತರ ಮಾಹಿತಿ ಕಲೆಹಾಕಿದ್ದಾರೆ.Sign in to your account
Username or Email Address


Password

 Remember Me


