ಬೆಂಗಳೂರು: ಇಂದು ಕರ್ನಾಟಕದಲ್ಲಿ 761 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 812 ಜನ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ.ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9,24,898ಕ್ಕೆ ಏರಿಕೆ ಆಗಿದೆ. ಈ ಪೈಕಿ 9,03,629 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 9,119 ಸಕ್ರಿಯ ಪ್ರಕರಣಗಳಿವೆ.ಒಟ್ಟು ಇಲ್ಲಿಯವರೆಗೆ 12,131 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 205 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇಂದು 10,377 ಆಂಟಿಜನ್ ಟೆಸ್ಟ್, 1,19,386 ಆರ್ ಟಿಪಿಸಿಆರ್ ಸೇರಿದಂತೆ ಒಟ್ಟು 1,29,763 ಪರೀಕ್ಷೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ 399, ಮೈಸೂರು 45, ದಕ್ಷಿಣ ಕನ್ನಡ 37, ಹಾಸನ ಹಾಗೂ ತುಮಕೂರಿನಲ್ಲಿ ತಲಾ 25 ಮಂದಿಗೆ ಸೋಂಕು ಬಂದಿದೆ.ಐಸಿಯುನಲ್ಲಿ ಒಟ್ಟು 205 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರು ನಗರದಲ್ಲಿ 89, ಕಲಬುರಗಿ 12, ತುಮಕೂರಿನಲ್ಲಿ 13 ಮಂದಿ ಐಸಿಯುನಲ್ಲಿದ್ದಾರೆ.Sign in to your account
Username or Email Address


Password

 Remember Me


