ಬೆಂಗಳೂರು: ಮುಂದೆ ಹೋಗುತ್ತಿದ್ದ ಲಾರಿಗೆ ಇನ್ನೊಂದು ಲಾರಿ ಡಿಕ್ಕಿ ಹೊಡೆದು ಡಿವೈಡರ್ ಹತ್ತಿ ರಸ್ತೆ ಮಧ್ಯೆಯೇ ಲಾರಿ ಉರುಳಿ ಬಿದ್ದಿರುವ ಘಟನೆ ಬೆಂಗಳೂರು-ತಮಿಳುನಾಡು ಸಂಪರ್ಕಿಸೋ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.ತುಂತುರು ಮಳೆಯಲ್ಲಿ ಬೆಳ್ಳಂಬೆಳಗ್ಗೆ ಎರಡು ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಆನೇಕಲ್ ತಾಲೂಕಿನ ಅತ್ತಿಬೆಲೆಯ ಸಮೀಪದ ಬೆಂಗಳೂರು-ತಮಿಳುನಾಡು ಸಂಪರ್ಕಿಸೋ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದು ಲಾರಿ ಬಂದು ಇನ್ನೊಂದು ಲಾರಿಗೆ ಡಿಕ್ಕಿ ಹೊಡೆದು ಭಾರೀ ಪ್ರಮಾಣದ ಅಪಘಾತ ಸಂಭವಿಸಿದೆ.ಲಾರಿ ಹೆದ್ದಾರಿಯಲ್ಲಿ ಉರುಳಿಬಿದ್ದ ಪರಿಣಾಮ ಸುಮಾರು 3 ಕಿಲೋಮೀಟರ್ ಬೆಂಗಳೂರಿನಿಂದ ತಮಿಳುನಾಡು ಕಡೆ ತೆರಳುವ ರಸ್ತೆ ಸಂಪೂರ್ಣ ಜಾಮ್ ಆಗಿದೆ. ಗುಜರಿ ಸಾಮಾನು ಹೊತ್ತೊಯ್ಯುತ್ತಿದ್ದ ಲಾರಿ ಆಗಿತ್ತು. ಅಪಘಾತದಿಂದದಾಗಿ ಲಾರಿಯಲ್ಲಿದ್ದ ಗುಜರಿವಸ್ತುಗಳು ರಸ್ತೆ ತುಂಬಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ.ಅಪಘಾತದಲ್ಲಿ ಲಾರಿಯ ಚಾಲಕ ಹಾಗೂ ನಿರ್ವಾಹಕ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.






 Advertisement 




Sign in to your account
Username or Email Address


Password

 Remember Me


