ಬೆಂಗಳೂರು: ಇಂದು ಕರ್ನಾಟಕದಲ್ಲಿ 784 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 1,238 ಜನ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ.ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9,24,137ಕ್ಕೆ ಏರಿಕೆ ಆಗಿದೆ. ಈ ಪೈಕಿ 9,02,817 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 9,177 ಸಕ್ರಿಯ ಪ್ರಕರಣಗಳಿವೆ.ಒಟ್ಟು ಇಲ್ಲಿಯವರೆಗೆ 12,124 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 210 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇಂದು 11,136 ಆಂಟಿಜನ್ ಟೆಸ್ಟ್, 1,23,037 ಆರ್‍ಟಿ ಪಿಸಿಆರ್ ಸೇರಿದಂತೆ ಒಟ್ಟು 1,34,173 ಪರೀಕ್ಷೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ 437, ದಕ್ಷಿಣ ಕನ್ನಡ 42, ಚಿಕ್ಕಬಳ್ಳಾಪುರ 30, ಹಾಸನ ಹಾಗೂ ಕೋಲಾರದಲ್ಲಿ ತಲಾ 24 ಮಂದಿಗೆ ಸೋಂಕು ಬಂದಿದೆ.ಐಸಿಯುನಲ್ಲಿ ಒಟ್ಟು 210 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರು ನಗರದಲ್ಲಿ 89, ಕಲಬುರಗಿ 15, ತುಮಕೂರು 14, ಹಾಸನದಲ್ಲಿ 10 ಮಂದಿ ಐಸಿಯುನಲ್ಲಿದ್ದಾರೆ.Sign in to your account
Username or Email Address


Password

 Remember Me


