ಕಲಬುರಗಿ: ಸಹೋದರರಿಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಭೂಸನೂರ ಗ್ರಾಮದಲ್ಲಿ ನಡೆದಿದೆ.ಸುನೀಲ್ (17) ಹಾಗೂ ಶೇಖರ್ (12) ಆತ್ಮಹತ್ಯೆಗೆ ಶರಣಾದ ಸಹೋದರರು. ಇವರಿಬ್ಬರು ಮನೆಯಲ್ಲಿ ತಂದೆ-ತಾಯಿಯೊಂದಿಗೆ ಜಗಳವಾಡಿದ್ದಾರೆ. ಬಳಿಕ ಹೊಲಕ್ಕೆ ಬಂದು ಸೊಂಟಕ್ಕೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೊಬೈಲ್ ವಿಷಯವಾಗಿ ಹೆತ್ತವರ ಜೊತೆ ಜಗಳವಾಡಿಕೊಂಡಿದ್ದಾರೆ. ಇದೇ ಕಾರಣದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರಿಗೂ ಈಜು ಬರುವ ಹಿನ್ನೆಲೆ ಸೊಂಟಕ್ಕೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿ ಪ್ರಾಣ ಬಿಟ್ಟಿದ್ದಾರೆ.ಘಟನೆ ಸಂಬಂಧ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


