ಹಾಸನ: ಜೋಳದ ರಾಶಿಗೆ ಕಿಡಿಗೇಡಿಗಳು ಬೆಂಕಿ ಹಾಕಿ ಸುಟ್ಟುಹಾಕಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ, ಬಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಮಹದೇವಸ್ವಾಮಿ ಎಂಬ ರೈತರು ಜೋಳದ ತೆನೆ ಕಟಾವು ಮಾಡಿ ಜಮೀನಿನಲ್ಲಿ ರಾಶಿ ಹಾಕಿದ್ದರು. ತಡರಾತ್ರಿ ಯಾರೋ ಕಿಡಿಗೇಡಿಗಳು ಜೋಳದ ರಾಶಿಗೆ ಬೆಂಕಿ ಹಾಕಿದ್ದಾರೆ. ಪರಿಣಾಮ ಜೋಳದ ರಾಶಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಕಷ್ಟಪಟ್ಟು ಜೋಳ ಬೆಳೆದಿದ್ದ ರೈತ ಕಂಗಾಲಾಗಿ ಕಣ್ಣೀರು ಹಾಕುತ್ತಿದ್ದಾನೆ.ದುಷ್ಕರ್ಮಿಗಳ ಕೃತ್ಯದಿಂದ ರೈತನಿಗೆ ಸುಮಾರು ಎರಡೂವರೆ ಲಕ್ಷಕ್ಕೂ ಅಧಿಕ ಪ್ರಮಾಣದ ನಷ್ಟ ಸಂಭವಿಸಿದೆ. ಜೋಳದ ರಾಶಿಗೆ ಬೆಂಕಿ ಹಾಕಿರುವ ದುಷ್ಕರ್ಮಿಗಳ ವಿರುದ್ಧ ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದಾರೆ. ಸರ್ಕಾರ ರೈತನ ನೆರವಿಗೆ ಧಾವಿಸಿ ಪರಿಹಾರ ನೀಡಬೇಕೆಂದು ಮನವಿ ಮಾಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವ ಬೇಲೂರು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡುತ್ತಿದ್ದಾರೆ.


 Advertisement 







 Advertisement 




Sign in to your account
Username or Email Address


Password

 Remember Me


