ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ನಿಮಗಿಂತಲೂ ಉತ್ತಮ ಭಾಂದವ್ಯ ನನಗಿದೆ, ಬಿಜೆಪಿಯವರೇ ನನಗೆ ನಿಮ್ಮ ಸ್ನೇಹ ಬೇಕಾಗಿಲ್ಲ ಎಂದು ಟ್ವಿಟ್ ಮಾಡುವ ಮೂಲಕ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸದ್ಯ ಯಾವ ಪಕ್ಷಕ್ಕೆ ಯಾರ ಅಗತ್ಯವೂ ಇಲ್ಲ. ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ.ನಮಗೆ ಬೇಕಿರುವುದು ರಾಜ್ಯದ ಅಭಿವೃದ್ಧಿ ಹಾಗೂ ನಮ್ಮ ಕಾರ್ಯಕರ್ತರು. ಪ್ರತಿಕೂಲ ಪರಿಸ್ಥಿತಿ ಇದ್ದರೂ ಕಾರ್ಯಕರ್ತರಲ್ಲಿ ಉತ್ಸಾಹ, ಚೈತನ್ಯವಿದೆ ಎಂಬುದು ಗ್ರಾ.ಪಂ. ಚುನಾವಣೆ ಫಲಿತಾಂಶದಿಂದ ಎಲ್ಲರಿಗೂ ಗೊತ್ತಾಗಿದೆ. ಈಗ ನಮ್ಮ ಮುಂದಿರುವುದು ಪಕ್ಷದ ಸಂಘಟನೆ ಮಾತ್ರ.
6/6— H D Kumaraswamy (@hd_kumaraswamy) January 3, 2021ಗ್ರಾಮ ಪಂಚಾಯತಿ ಚುನಾವಣೆ ಫಲಿತಾಂಶದ ನಂತರ ಜೆಡಿಎಸ್‍ನನ್ನು ಮುಗಿಸುವ ಪ್ರಯ್ನಗಳೆಲ್ಲಾ ವಿಫಲವಾಗಿದೆ ಎಂಬ ಸತ್ಯ ಇದೀಗ ಬಿಜೆಪಿಗೆ ಮನವರಿಕೆಯಾಗಿದೆ. ಇದೇ ಕಾರಣಕ್ಕೆ ಮೈತ್ರಿಯ ಕಪಟ ನಾಟಕವಾಡಲು ಬಿಜೆಪಿ ಮುಂದಾಗಿದೆ. ಹೀಗಾಗಿ ಜೆಡಿಎಸ್ ಎನ್‍ಡಿಎ ಮೈತ್ರಿಯಾಗಲಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಆದ್ರೆ ಈ ಎಲ್ಲಾ ಗೊಂದಲಗಳಿಗೆ ಮಾಜಿ ಸಿಎಂ ಹೆಚ್‍ಡಿ.ಕುಮಾರಸ್ವಾಮಿ ಟ್ವಿಟ್ ಮಾಡುವ ಮೂಲಕ ಉತ್ತರಿಸಿದ್ದಾರೆ.1997ರಲ್ಲಿ ದೇವೇಗೌಡರು ಪ್ರಧಾನಿ ಸ್ಥಾನದಿಂದ ಇಳಿಯುವಾಗ ಇದೇ ಬಿಜೆಪಿಯ ಅಗ್ರಮಾನ್ಯ ಸಾರ್ವಕಾಲಿಕ ನಾಯಕ ದಿ. ವಾಜಪೇಯಿ ಅವರು ದೇವೇಗೌಡರಿಗೆ, ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿ ಬಂದವರು ನಾವು. ಇನ್ನು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡುವ ವ್ಯಕ್ತಿ ನಾನಲ್ಲ.
5/6— H D Kumaraswamy (@hd_kumaraswamy) January 3, 2021ನೆನಪಿರಲಿ, ಪ್ರಧಾನಿ ಅವರೊಂದಿಗೆ ರಾಜ್ಯ ಬಿಜೆಪಿ ನಾಯಕರಿಗಿಂತಲೂ ಉತ್ತಮ ಬಾಂಧ್ಯವೂ ನನಗಿದೆ. ಯಡಿಯೂರಪ್ಪ ಹಿರಿಯರು ಎಂಬ ಗೌರವವೂ ಇದೆ. ವಿರೋಧಕ್ಕಾಗಿ ವಿರೋಧ ಪಕ್ಷವಾಗಿರಬಾರದು ಎಂಬ ಆಶಯವೂ ಇದೆ. ಬಿಜೆಪಿ ಅಪಪ್ರಚಾರಕ್ಕೆ ಕೈ ಹಾಕಿದರೆ, ಬಾಂಧವ್ಯ, ಗೌರವ, ಆಶಯಗಳಿಗೆ ಧಕ್ಕೆಯಾಗಲಿದೆ. ಜೆಡಿಎಸ್ ವಿಚಾರದಲ್ಲಿ ಬಿಜೆಪಿಯು ಎಚ್ಚರವಾಗಿರಲಿ ಎಂದು ಹೇಳಿದರು.ಜೆಡಿಎಸ್ ಜೊತೆಗೆ ಮಿತ್ರತ್ವದ ನಾಟಕವಾಡಿ, ಕಡೆಗೆ ಪಕ್ಷವನ್ನೇ ಒಡೆಯಲು ಯತ್ನಿಸಿದವರು ಅನೇಕರು. ಈಗ ಬಿಜೆಪಿ ಸರದಿ. ಅಷ್ಟಕ್ಕೂ ಮೈತ್ರಿಗೆ ಜೆಡಿಎಸ್‍ನಿಂದ ಬಿಜೆಪಿಗೆ ಅರ್ಜಿ ಹಾಕಿದವರು ಯಾರು? ಜೆಡಿಎಸ್‍ನೊಂದಿಗೆ ಮೈತ್ರಿ ಇಲ್ಲವೆಂದಿರುವ ಬಿಜೆಪಿ ಉಸ್ತುವಾರಿ ಎದುರು ಮೈತ್ರಿ ಪ್ರಸ್ತಾಪ ಇಟ್ಟವರ್ಯಾರು? ಎಂದು ಪ್ರಶ್ನಿಸುವ ಮೂಲಕ ಕೆಂಡಾಮಂಡಲವಾಗಿದ್ದಾರೆ.ಜೆಡಿಎಸ್‌ ಎನ್‌ಡಿಎ ಮೈತ್ರಿಕೂಟ ಸೇರುತ್ತದೆ, ಕುಮಾರಸ್ವಾಮಿ ಅವರನ್ನು ಕೇಂದ್ರ ಮಂತ್ರಿ ಮಾಡಲಾಗುತ್ತದೆ ಎಂಬುದೆಲ್ಲವೂ ಸುಳ್ಳಿನ ಕಂತೆ. ಈ ರೀತಿಯ ಆಮಿಷಗಳ ಮೂಲಕ ಬಿಜೆಪಿಯು ಜೆಡಿಎಸ್‌ ಕಾರ್ಯಕರ್ತರು, ಜೆಡಿಎಸ್‌ ಬೆಂಬಲಿಸುವ ಜನರ ಮನಸ್ಸುಗಳಿಗೆ ವಿಷ ಬಿತ್ತುವ ಕೆಲಸ ಮಾಡುತ್ತಿದೆ. ಇದು ನೈತಿಕವಲ್ಲದ ರಾಜಕಾರಣ ಎಂಬುದನ್ನು ಬಿಜೆಪಿ ತಿಳಿಯಲಿ.
4/6— H D Kumaraswamy (@hd_kumaraswamy) January 3, 2021ಜೆಡಿಎಸ್ ಎನ್‍ಡಿಎ ಮೈತ್ರಿಕೂಟ ಸೇರುತ್ತದೆ, ಕುಮಾರಸ್ವಾಮಿ ಅವರನ್ನು ಕೇಂದ್ರ ಮಂತ್ರಿ ಮಾಡಲಾಗುತ್ತದೆ ಎಂಬುದೆಲ್ಲವೂ ಸುಳ್ಳಿನ ಕಂತೆ. ಈ ರೀತಿಯ ಆಮಿಷಗಳ ಮೂಲಕ ಬಿಜೆಪಿಯು ಜೆಡಿಎಸ್ ಕಾರ್ಯಕರ್ತರು, ಜೆಡಿಎಸ್ ಬೆಂಬಲಿಸುವ ಜನರ ಮನಸ್ಸುಗಳಿಗೆ ವಿಷ ಬಿತ್ತುವ ಕೆಲಸ ಮಾಡುತ್ತಿದೆ. ಇದು ನೈತಿಕವಲ್ಲದ ರಾಜಕಾರಣ ಎಂಬುದನ್ನು ಬಿಜೆಪಿ ತಿಳಿಯಲಿ ಎಂದು ಕಿವಿ ಮಾತು ಹೇಳಿದರು.ನೆನಪಿರಲಿ, ಪ್ರಧಾನಿ ಅವರೊಂದಿಗೆ ರಾಜ್ಯ ಬಿಜೆಪಿ ನಾಯಕರಿಗಿಂತಲೂ ಉತ್ತಮ ಬಾಂಧವ್ಯವೂ ನನಗಿದೆ. ಯಡಿಯೂರಪ್ಪ ಹಿರಿಯರು ಎಂಬ ಗೌರವವೂ ಇದೆ. ವಿರೋಧಕ್ಕಾಗಿ ವಿರೋಧ ಪಕ್ಷವಾಗಿರಬಾರದು ಎಂಬ ಆಶಯವೂ ಇದೆ. ಬಿಜೆಪಿ ಅಪಪ್ರಚಾರಕ್ಕೆ ಕೈ ಹಾಕಿದರೆ, ಬಾಂಧವ್ಯ, ಗೌರವ, ಆಶಯಗಳಿಗೆ ಧಕ್ಕೆಯಾಗಲಿದೆ. ಜೆಡಿಎಸ್‌ ವಿಚಾರದಲ್ಲಿ ಬಿಜೆಪಿಯು ಎಚ್ಚರವಾಗಿರಲಿ.
2/6— H D Kumaraswamy (@hd_kumaraswamy) January 3, 20211997ರಲ್ಲಿ ದೇವೇಗೌಡರು ಪ್ರಧಾನಿ ಸ್ಥಾನದಿಂದ ಇಳಿಯುವಾಗ ಇದೇ ಬಿಜೆಪಿಯ ಅಗ್ರಮಾನ್ಯ ಸಾರ್ವಕಾಲಿಕ ನಾಯಕ ದಿ. ವಾಜಪೇಯಿ ಅವರು ದೇವೇಗೌಡರಿಗೆ, ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿ ಬಂದವರು ನಾವು. ಇನ್ನು ಯಕಶ್ಚಿತ್ ಮಂತ್ರಿ ಸ್ಥಾನಕ್ಕೆ ಆಸೆ ಪಡುವ ವ್ಯಕ್ತಿ ನಾನಲ್ಲ.ಜೆಡಿಎಸ್‌ ಅನ್ನು ಮುಗಿಸುವ ಪ್ರಯತ್ನಗಳೆಲ್ಲ ವಿಫಲವಾಗಿವೆ ಎಂಬುದು ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದ ಮೂಲಕ ಬಿಜೆಪಿಗೆ ಮನವರಿಕೆಯಾಗಿದೆ. ಇದೇ ಕಾರಣಕ್ಕೆ ಮೈತ್ರಿಯ ಕಪಟ ನಾಟಕವಾಡಲು ಬಿಜೆಪಿ ನಿಂತಿದೆ. ಇದಕ್ಕಾಗಿಯೇ ಜೆಡಿಎಸ್‌ ಎನ್‌ಡಿಎ ಸೇರಲಿದೆ ಎಂಬ ಕಲ್ಪಿತ ಸುದ್ದಿಗಳನ್ನು ವ್ಯವಸ್ಥಿತವಾಗಿ ಹರಡುತ್ತಿದೆ. ಇದೆಲ್ಲವೂ ಅಪ್ಪಟ ಸುಳ್ಳು.
1/6— H D Kumaraswamy (@hd_kumaraswamy) January 3, 2021ಸದ್ಯ ಯಾವ ಪಕ್ಷಕ್ಕೆ ಯಾರ ಅಗತ್ಯವೂ ಇಲ್ಲ. ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ. ನಮಗೆ ಬೇಕಿರುವುದು ರಾಜ್ಯದ ಅಭಿವೃದ್ಧಿ ಹಾಗೂ ನಮ್ಮ ಕಾರ್ಯಕರ್ತರು. ಪ್ರತಿಕೂಲ ಪರಿಸ್ಥಿತಿ ಇದ್ದರೂ ಕಾರ್ಯಕರ್ತರಲ್ಲಿ ಉತ್ಸಾಹ, ಚೈತನ್ಯವಿದೆ ಎಂಬುದು ಗ್ರಾ.ಪಂ. ಚುನಾವಣೆ ಫಲಿತಾಂಶದಿಂದ ಎಲ್ಲರಿಗೂ ಗೊತ್ತಾಗಿದೆ. ಈಗ ನಮ್ಮ ಮುಂದಿರುವುದು ಪಕ್ಷದ ಸಂಘಟನೆ ಮಾತ್ರ ಎಂದು ಬಿಜೆಪಿ ಜೊತೆ ನಮಗೆ ಯಾವುದೇ ಸಂಬಂಧವಿಲ್ಲ, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿಲ್ಲ ಎಂಬುವುದನ್ನು ಟ್ವಿಟ್ ಮಾಡುವ ಮೂಲಕ ಹೆಚ್.ಡಿ. ಕುಮಾರಸ್ವಾಮಿಯವರು ಸ್ಪಷ್ಟಪಡಿಸಿದರು.






 Advertisement 




Sign in to your account
Username or Email Address


Password

 Remember Me


