ಬೆಂಗಳೂರು: ರಾಜ್ಯದಲ್ಲಿ ಇಂದು 877 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 1,084 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಈ ವೆರೆಗೆ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 9,20,373ಕ್ಕೆ ಏರಿಕೆಯಾಗಿದೆ. ಇಂದು ಕೊರೊನಾ ಸೋಂಕಿನಿಂದ 6 ಜನ ಮೃತಪಟ್ಟಿದ್ದು, ಈ ಮೂಲಕ ಒಟ್ಟು 12,096 ಜನ ಕೊರೊನಾಗೆ ಬಲಿಯಾದಂತಾಗಿದೆ. ರಾಜ್ಯದಲ್ಲಿ 11,058 ಸಕ್ರಿಯ ಪ್ರಕರಣಗಳಿವೆ. ರಾಜ್ಯದ ವಿವಿಧ ಆಸ್ಪತ್ರೆಗಳ ಐಸಿಯುನಲ್ಲಿ 189 ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.ಕೋವಿಡ್-19 ಸೋಂಕಿನ ಖಚಿತ ಪ್ರಕರಣಗಳ ಪ್ರಮಾಣ ಶೇ.0.74 ಮತ್ತು ಮರಣ ಪ್ರಮಾಣ ಶೇ.0.68ರಷ್ಟಿದೆ. ಇಂದು ಯುಕೆಯಿಂದ ಬಂದ 77 ಜನರನ್ನು ಆರ್.ಟಿ.-ಪಿಸಿಆರ್ ಮತ್ತು ಇತರೆ ಪರೀಕ್ಷೆಗೆ ಒಳಪಡಿಸಲಾಗಿದ್ದು, ಎಲ್ಲರ ಪರೀಕ್ಷಾ ವರದಿ ಇನ್ನೂ ಲಭ್ಯವಾಗಿಲ್ಲ. ಯುಕೆಯಿಂದ ಬಂದ 33 ಜನರು ಕೊರೊನಾ ಸೋಂಕಿತರಾಗಿದ್ದಾರೆ. ಇನ್ನೂ ಒಟ್ಟು 80 ಜನರ ವರದಿ ಲಭ್ಯವಾಗಬೇಕಿದೆ.ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 16, ಬಳ್ಳಾರಿ 4, ಬೆಳಗಾವಿ 14, ಬೆಂಗಳೂರು ಗ್ರಾಮಾಂತರ 28, ಬೆಂಗಳೂರು ನಗರ 464, ಬೀದರ್ 6, ಚಾಮರಾಜನಗರ 12, ಚಿಕ್ಕಬಳ್ಳಾಪುರ 29, ಚಿಕ್ಕಮಗಳೂರು 8, ಚಿತ್ರದುರ್ಗ 39, ದಕ್ಷಿಣ ಕನ್ನಡ 27, ದಾವಣಗೆರೆ 10, ಧಾರವಾಡ 5, ಗದಗ 12, ಹಾಸನ 20, ಹಾವೇರಿ 2, ಕಲಬುರಗಿ 11, ಕೊಡಗು 7, ಕೋಲಾರ 14, ಕೊಪ್ಪಳ 0, ಮಂಡ್ಯ 13, ಮೈಸೂರು 26, ರಾಯಚೂರು 3, ರಾಮನಗರ 0, ಶಿವಮೊಗ್ಗ 20, ತುಮಕೂರು 32, ಉಡುಪಿ 14, ಉತ್ತರ ಕನ್ನಡ 16, ವಿಜಯಪುರ 19 ಮತ್ತು ಯಾದಗಿರಿಯಲ್ಲಿ 6 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.Sign in to your account
Username or Email Address


Password

 Remember Me


