ಬೆಂಗಳೂರು: ಯುವ ನಿರ್ದೇಶಕ ಪವನ್ ಒಡೆಯರ್ ಹಾಗೂ ನಟಿ ಅಪೇಕ್ಷಾ ದಂಪತಿ ಗಂಡು ಮಗು ಹುಟ್ಟಿರುವ ವಿಚಾರ ಗೊತ್ತೇ ಇದೆ. ಇದೀಗ ದಂಪತಿ ತಮ್ಮ ಮುದ್ದಿನ ಮಗನಿಗೆ ಹೆಸರಿಟ್ಟಿದ್ದಾರೆ. ಹೌದು. ತಮ್ಮ ಮಗನ ಹೆಸರನ್ನು ದಂಪತಿ ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಮಗನಿಗೆ ಶೌರ್ಯ ಎಂದು ಹೆಸರಿಟ್ಟಿದ್ದಾರೆ.ಮುದ್ದಿನ ಮಗನಿಗೆ ಹೆಸರಿಟ್ಟಿರುವುದನ್ನು ಒಂದು ಪುಟ್ಟ ವೀಡಿಯೋ ಮಾಡುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಮಗನ ನಾಮಕರಣದ ಒಂದು ಫೋಟೋ ಹಾಗೂ ಮಗುವಿನ ಕೆಲವು ಮುದ್ದಾದ ಫೋಟೋಗಳನ್ನು ಕೂಡ ವೀಡಿಯೋದಲ್ಲಿ ಸೇರಿಸಿದ್ದಾರೆ.  A post shared by Pavan wadeyar (@pavanwadeyar)2020ರ ಡಿಸೆಂಬರ್ 10 ರಮದು ಪವನ್ ಒಡೆಯರ್ ಹಾಗೂ ಅಪೇಕ್ಷಾ ಪುರೋಹಿತ್ ದಂಪತಿಗೆ ಮಗ ಹುಟ್ಟಿದ್ದನು. ಈ ಸಂತಸದ ವಿಚಾರವನ್ನು ಪವನ್ ಒಡೆಯರ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯ ಮೂಲಕ ಹಂಚಿಕೊಂಡಿದ್ದರು. ಪತ್ನಿ ಹಾಗೂ ಮಗು ಆಸ್ಪತ್ರೆಯಲ್ಲಿರುವ ಫೋಟೋವನ್ನು ಪವನ್ ತಮ್ಮ ಇನ್‍ಸ್ಟಾದಲ್ಲಿ ಅಪ್ಲೋಡ್ ಮಾಡಿಕೊಂಡಿದ್ದರು. ಅಲ್ಲದೆ ನನ್ನ ಜನ್ಮದಿನದಂದೇ ವಿಶ್ವದ ಅತ್ಯಂತ ಅದ್ಭುತ ಉಡುಗೊರೆ ದೊರೆತಿದ್ದು, ಗಂಡು ಮಗುವಿನ ಜನನವಾಗಿದೆ. ಜೈ ಚಾಮುಂಡೇಶ್ವರಿ ಎಂದು ಬರೆದುಕೊಂಡಿದ್ದರು.ಪವನ್ ಒಡೆಯರ್ ಮತ್ತು ನಟಿ ಅಪೇಕ್ಷಾ ಅವರು 2018ರ ಮೇ 20ರಂದು ಬಾಗಲಕೋಟೆ ಜಿಲ್ಲೆಯ ವಿದ್ಯಾಗಿರಿಯಲ್ಲಿರುವ ಗೌರಿ ಶಂಕರ್ ಕಲ್ಯಾಣ ಮಂಟಪದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದರು. ಅಪೇಕ್ಷಾ ಪುರೋಹಿತ್ ಬಾಗಲಕೋಟೆಯ ಮೂಲದವರಾಗಿದ್ದು, ಕನ್ನಡದ ಕಿರುತೆರೆ ನಟಿಯಾಗಿ ಅಭಿನಯಿಸಿದ್ದಾರೆ.  A post shared by Pavan wadeyar (@pavanwadeyar) Sign in to your account
Username or Email Address


Password

 Remember Me


