ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಶಾಲಾ ಕಾಲೇಜುಗಳು ಆರಂಭವಾಗಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಟ್ವೀಟ್ ಮಾಡಿ ಪೋಷಕರಿಗೆ ಕಿವಿಮಾತು ಹೇಳಿದ್ದಾರೆ.ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕೊರೊನಾ ಸೋಂಕು ಹಿನ್ನೆಲೆ ಕಳೆದ 9 ತಿಂಗಳಿನಿಂದ ಮುಚ್ಚಲಾಗಿದ್ದ ಶಾಲಾ-ಕಾಲೇಜುಗಳನ್ನು ವರ್ಷದ ಆರಭದಿಂದ ಪುನಃ ತೆರೆಯಲಾಗಿದೆ. ಮಕ್ಕಳ ಆರೋಗ್ಯ ಮತ್ತು ಶೈಕ್ಷಣಿಕ ಪ್ರಗತಿ ಎರಡನ್ನೂ ಗಮನದಲ್ಲಿಟ್ಟುಕೊಂಡು ಸರ್ಕಾರ ಬಹಳ ಎಚ್ಚರಿಕೆ ಮತ್ತು ಜವಾಬ್ದಾರಿಯಿಂದ ಈ ನಿರ್ಧಾರ ಕೈಗೊಂಡಿದೆ. ಕೋವಿಡ್-19 ನಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷರಿಗೆ ಕೆಲವು ಗೊಂದಲ ಮತ್ತು ಆತಂಕಗಳಿರುತ್ತದೆ. ಆದ್ರೆ ಪೋಷಕರು ಆತಂಕ ಪಡುವ ಅಗತ್ಯವಿಲ್ಲ, ಯಾವುದೇ ಗೊಂದಲವಿಲ್ಲದೆ ಮಕ್ಕಳನ್ನು ಶಾಲೆಗೆ ಕಳುಹಿಸಿಕೊಡಿ ಎಂದು ಬರೆದುಕೊಂಡಿದ್ದಾರೆ.ಇಂದಿನಿಂದ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗುತ್ತಿವೆ. ಮಕ್ಕಳ ಆರೋಗ್ಯ ಮತ್ತು ಶೈಕ್ಷಣಿಕ ಪ್ರಗತಿ ಎರಡನ್ನೂ ಗಮನದಲ್ಲಿಟ್ಟುಕೊಂಡು ಸರ್ಕಾರ ಬಹಳ ಎಚ್ಚರಿಕೆ ಮತ್ತು ಜವಾಬ್ದಾರಿಯಿಂದ ಈ ನಿರ್ಧಾರ ಕೈಗೊಂಡಿದೆ. 8 ತಿಂಗಳ ನಂತರ ಶಾಲೆ ಕಾಲೇಜುಗಳಿಗೆ ಮರಳುತ್ತಿರುವ ವಿದ್ಯಾರ್ಥಿಗಳಿಗೆ, ಅವರ ಪೋಷಕರಿಗೆ ನನ್ನ ಕಿವಿಮಾತು.(1/3)— Dr Sudhakar K (@mla_sudhakar) January 1, 2021ಮಕ್ಕಳನ್ನು ಯಾವುದೇ ಆತಂಕವಿಲ್ಲದೆ ಶಾಲೆಗೆ ಕಳುಹಿಸಿ. ಅದರಲ್ಲಿಯೂ ಗ್ರಾಮೀಣ ಭಾಗದ ಪೋಷಕರಲ್ಲಿ ನಾನು ಮನವಿ ಮಾಡುತ್ತೇನೆ, ಮಕ್ಕಳ ಆಗಮನಕ್ಕೆ ಅವರ ಶಾಲೆ ಕಾಯುತ್ತಿದೆ, ಶಿಕ್ಷಕರು ಮಕ್ಕಳನ್ನು ಸ್ವಾಗತಿಸಲು ಎದುರು ನೋಡುತ್ತಿದ್ದಾರೆ. ಸರ್ಕಾರ ಸದಾ ನಿಮ್ಮೊಂದಿಗಿದೆ. ಬನ್ನಿ, ಕೊರೊನಾ ಓಡಿಸೋಣ, ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ ಎಂದು ಹೇಳಿದ್ದಾರೆ.SSLC ಪರೀಕ್ಷೆ ಸಂದರ್ಭದಲ್ಲೂ ಇದೇ ರೀತಿ ಆತಂಕ ಇದ್ದದ್ದು ಸಹಜ. ಆದರೆ ಅತ್ಯಂತ ಯಶಸ್ವಿಯಾಗಿ ಪರೀಕ್ಷೆ ನಡೆಸುವ ಮೂಲಕ ಸರ್ಕಾರ ತನ್ನ ಬದ್ಧತೆ ನಿರೂಪಿಸಿತ್ತು. ಈಗಲೂ ಸಹ ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. 'ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ' ಎಂಬುದೇ ಸರ್ಕಾರದ ಧ್ಯೇಯ. (2/3)— Dr Sudhakar K (@mla_sudhakar) January 1, 2021ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸಂದರ್ಭದಲ್ಲೂ ಇದೇ ರೀತಿ ಕೊರೊನ ವೈರಸ್‍ನಿಂದ ಬಗೆಗೆ ಆತಂಕ ಸಹಜವಾಗಿತ್ತು. ಆದರೆ ಅತ್ಯಂತ ಯಶಸ್ವಿಯಾಗಿ ಪರೀಕ್ಷೆಯನ್ನು ನಡೆಸುವ ಮೂಲಕ ಸರ್ಕಾರ ತನ್ನ ಬದ್ಧತೆ ನಿರೂಪಿಸಿತ್ತು. ಈಗಲೂ ಸಹ ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’ ಎಂಬುದೇ ಸರ್ಕಾರದ ಧ್ಯೇಯ ಎಂದು ತಿಳಿಸಿದ್ದಾರೆ.ಪೋಷಕರಲ್ಲಿ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಪೋಷಕರಲ್ಲಿ ನನ್ನ ಮನವಿ. ಮಕ್ಕಳನ್ನು ಯಾವುದೇ ಆತಂಕವಿಲ್ಲದೆ ಶಾಲೆಗೆ ಕಳುಹಿಸಿ. ಮಕ್ಕಳ ಆಗಮನಕ್ಕೆ ಅವರ ಶಾಲೆ ಕಾಯುತ್ತಿದೆ, ಶಿಕ್ಷಕರು ಮಕ್ಕಳನ್ನು ಸ್ವಾಗತಿಸಲು ಎದುರು ನೋಡುತ್ತಿದ್ದಾರೆ. ಸರ್ಕಾರ ಸದಾ ನಿಮ್ಮೊಂದಿಗಿದೆ. ಬನ್ನಿ, ಕೊರೊನಾ ಓಡಿಸೋಣ, ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ. (3/3)— Dr Sudhakar K (@mla_sudhakar) January 1, 2021Sign in to your account
Username or Email Address


Password

 Remember Me


