ಕೊಪ್ಪಳ: ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ವ್ಯಕ್ತಿಯನ್ನು ಬೈಕಿನಲ್ಲಿ ಕೂರಿಸಿಕೊಂಡು ಆಸ್ಪತ್ರೆಗೆ ಕರೆದೊಯ್ದ ವಿಲಕ್ಷಣ ಘಟನೆಯೊಂದು ಕೊಪ್ಪಳದಲ್ಲಿ ನಡೆದಿದೆ.ಈ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿ ನಡೆದಿದೆ. ಅಪಘಾತವಾಗಿ ಗಾಯಗೊಂಡು ನರಳಾಡುತ್ತಿದ್ದ ವ್ಯಕ್ತಿ ಗದಗ ಮೂಲದವನು. ಗಾಯಗೊಂಡು ನರಳಾಡುತ್ತಿದ್ದುದನ್ನು ಕಣ್ಣಾರೆ ಕಂಡ ಸ್ಥಳೀಯ ನಿವಾಸಿ ಪ್ರತಾಪ್, ಅಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಆದರೆ ಕೆಲ ಹೊತ್ತಾದರೂ ಅಂಬುಲೆನ್ಸ್ ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ಕೊನೆಗೆ ತನ್ನ ಬೈಕಿನಲ್ಲಿಯೇ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.ಅಳವಂಡಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಗಾಯಾಳುವನ್ನು ಪ್ರತಾಪ್ ಸೇರಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಗದಗ್ ಗೆ ರವಾನೆ ಮಾಡಿದ್ದಾರೆ. ಗಾಯಾಳುವನ್ನು ಬೈಕಿನಲ್ಲಿ ಕರೆದುಕೊಂಡು ಹೋಗುತ್ತಿರುವುದನ್ನು ತಮ್ಮ ಮೊಬೈಲ್ ನಲ್ಲಿ ವೀಡಿಯೋ ಮಾಡಿರುವ ಪ್ರತಾಪ್, ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.ವೀಡಿಯೋದಲ್ಲಿ ಪ್ರತಾಪ್ ಅವರು ಸಾರಿಗೆ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ರಿಪೇರಿ ಮಾಡಲು ಮನವಿ ಮಾಡಿದ್ರೂ ಕ್ಯಾರೇ ಅನ್ನದ ಸಾರಿಗೆ ಸಚಿವರರ ವಿರುದ್ಧ ಕಿಡಿಕಾರಿದ್ದಾರೆ.






 Advertisement 




Sign in to your account
Username or Email Address


Password

 Remember Me


