ಚಿಕ್ಕಮಗಳೂರು: ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್ ಧರ್ಮೇಗೌಡ ಅವರು ಆತ್ಮಹತ್ಯೆಗೆ ಶರಣಾಗಿದ್ದು, ಇದೀಗ ರೈಲು ಚಾಲಕ ಅವರ ಸಾವಿನ ರಹಸ್ಯವನ್ನು ತಿಳಿಸಿದ್ದಾರೆ.ರೈಲು ಚಾಲಕ ಸಿದ್ದರಾಮ್ ಅವರು ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಈ ಮೂಲಕ ಧರ್ಮೇಗೌಡರಿಗೆ ಡಿಕ್ಕಿ ಹೊಡೆದಿದ್ದು ಜನ ಶತಾಬ್ದಿ ರೈಲು ಅನ್ನೋದು ಕನ್ಫರ್ಮ್ ಆಗಿದೆ.ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಗುಣಸಾಗರದ ಬಳಿ ಬಿಳಿ ಬಟ್ಟೆ ಧರಿಸಿದ್ದ ವ್ಯಕ್ತಿಯೊಬ್ಬರು ಹಳಿಯ ಮೇಲೆ ನಿಂತಿದ್ದರು. ಹಳಿ ಮೇಲೆ ರೈಲಿಗೆ ನೇರಾ-ನೇರ ನಿಂತಿರುವುದು ಕಾಣಿಸಿತ್ತು. ರೈಲು ವೇಗವಾಗಿದ್ದ ಕಾರಣ ನಿಲ್ಲಿಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.ನಡೆದಿದ್ದೇನು..?
ಎಸ್.ಎಲ್ ಧರ್ಮೇಗೌಡ ಅವರು ಸೋಮವಾರ ಸಂಜೆ 6.30ರ ಸುಮಾರಿಗೆ ಗುಣಸಾಗರಕ್ಕೆ ಆಗಮಿಸಿದ್ದರು. ಸಖರಾಯಪಟ್ಟಣದ ಮನೆಯಿಂದ ಡ್ರೈವರ್ ಜೊತೆ ಕಾರಿನಲ್ಲಿ ಬಂದಿದ್ದ ಅವರು, ರೈಲ್ವೆ ಟ್ರ್ಯಾಕ್ ಬಳಿ ಕಾರನ್ನ ನಿಲ್ಲಿಸಲು ಡ್ರೈವರಿಗೆ ಸೂಚನೆ ನೀಡಿದ್ದಾರೆ. ಇತ್ತ ರೈಲ್ವೆ ಹಳಿಯತ್ತ ಬರುವಾಗ ಹಳ್ಳಿಗರನ್ನ ಮಾತನಾಡಿಸಿ ಬಂದಿದ್ದರು. ಅಲ್ಲದೆ ನನಗೆ ಒಬ್ಬರ ಜೊತೆ ಖಾಸಗಿಯಾಗಿ ಮಾತನಾಡಬೇಕು, ನೀನು ಹೋಗು ಅಂತ ಚಾಲಕನನ್ನು ಕಳುಹಿಸಿದ್ದಾರೆ. ಆ ಬಳಿಕ ಕಡೂರಿನ ವ್ಯಕ್ತಿಯೊಬ್ಬರಿಗೆ ಫೋನ್ ಮಾಡಿ ಜನಶತಾಬ್ದಿ ರೈಲು ಬರುವ ಸಮಯವನ್ನು ವಿಚಾರಿಸಿದ್ದಾರೆ. ನಂತರ ತಮ್ಮ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದರು.ನಂತರ ಜನಶತಾಬ್ದಿ ರೈಲಿಗೆ ತಲೆಕೊಟ್ಟು ಧರ್ಮೇಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯಿಂದ ಧರ್ಮೇಗೌಡ ಅವರ ಮೃತದೇಹ ಛಿದ್ರಗೊಂಡಿದ್ದು, ಸುಮಾರು 100 ಮೀಟರ್ ದೂರದಲ್ಲಿ ಕೈ ಪತ್ತೆಯಾಗಿತ್ತು. ಪರಿಷತ್‍ನಲ್ಲಿ ನಡೆದ ಗಲಾಟೆಯಿಂದ ಮನಸ್ಸಿಗೆ ನೋವಾಗಿದೆ. ಮನೆಯಲ್ಲಿನ ಆಸ್ತಿ ವಿಚಾರ, ಹಣಕಾಸು ಸಂಬಂಧ ಡೆತ್‍ನೋಟ್‍ನಲ್ಲಿ ಬರೆದಿದ್ದರು. ಅಲ್ಲದೆ ಪತ್ನಿ ಮಮತಾ, ಮಗ, ಮಗಳಲ್ಲಿ ಕ್ಷಮೆ ಕೂಡ ಕೇಳಿದ್ದು, ಮನೆಯನ್ನು ಪೂರ್ಣಗೊಳಿಸುವಂತೆ ಸೂಚನೆ ಕೂಡ ನೀಡಿದ್ದರು.Sign in to your account
Username or Email Address


Password

 Remember Me


