ಮಂಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಬೀಚ್ ಪ್ರವೇಶ ನಿಷೇಧ ಮಾಡಿ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ.ಡಿ.31 ರಂದು ಮಧ್ಯಾಹ್ನ 12 ಗಂಟೆಯಿಂದ ಜನವರಿ 2 ರ ಮಧ್ಯಾಹ್ನ 12 ಗಂಟೆಯವರೆಗೆ ನಿಷೇಧ ಹೇರಲಾಗಿದೆ. ಉಳ್ಳಾಲ, ಸೋಮೇಶ್ವರ, ಮೊಗವೀರಪಟ್ಣ, ಪಣಂಬೂರು, ತಣ್ಣೀರುಬಾವಿ, ಸಸಿಹಿತ್ಲು ಮತ್ತು ಸುರತ್ಕಲ್ ಬೀಚ್ ಸೇರಿ ಎಲ್ಲಾ ಕಡಲ ಕಿನಾರೆಗಳಿಗೆ ಸಾರ್ವಜನಿಕರನ್ನು ನಿಷೇಧಿಸಲಾಗಿದೆ.ಸ್ಥಳೀಯ ಹಾಗೂ ಸಾಂಪ್ರದಾಯಿಕ ಮೀನುಗಾರರನ್ನು ಹೊರತುಪಡಿಸಿ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ. ರೂಪಾಂತರಿ ಕೊರೊನಾ ತಡೆಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವ ಅಂಗವಾಗಿ ಯಾವುದೇ ಪ್ರವಾಸಿಗರು, ಪ್ರವೇಶಿಸುವುದನ್ನು ನಿಷೇಧಿಸಿ ಕೋವಿಡ್ ನಿಯಂತ್ರಣ ಕಾಯಿದೆ ಪ್ರಕಾರ ನಿಷೇಧಿಸಿ ದ.ಕ ಜಿಲ್ಲಾಧಿಕಾರಿ ಈ ಆದೇಶವನ್ನು ಹೊರಡಿಸಿದ್ದಾರೆ.






 Advertisement 




Sign in to your account
Username or Email Address


Password

 Remember Me


