ಚಿಕ್ಕಮಗಳೂರು: ರೈಲಿಗೆ ತಲೆಕೊಟ್ಟು ಪರಿಷತ್ ಉಪಸಭಾಪತಿ ಎಸ್.ಎಲ್ ಧರ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರ ಹಾಗೂ ಇತ್ತೀಚೆಗೆ ಪರಿಷತ್ ನಲ್ಲಿ ನಡೆದಿದ್ದ ಗಲಾಟೆಯಿಂದ ಧರ್ಮೇಗೌಡ ನೊಂದಿದ್ದರು ಎಂದು ಹೇಳಳಾಗುತ್ತಿದೆ. ಈ ಎಲ್ಲಾ ವಿಚಾರಗಳನ್ನು ಅವರು ತಮ್ಮ ಡೆತ್ ನೋಟ್ ನಲ್ಲಿ ಬರೆದಿದ್ದಾರೆ.ಎಸ್.ಎಲ್ ಧರ್ಮೇಗೌಡ ಅವರು ನಿನ್ನೆ ಸಂಜೆ 6.30ರ ಸುಮಾರಿಗೆ ಗುಣಸಾಗರಕ್ಕೆ ಆಗಮಿಸಿದ್ದರು. ಸಖರಾಯಪಟ್ಟಣದ ಮನೆಯಿಂದ ಡ್ರೈವರ್ ಜೊತೆ ಕಾರಿನಲ್ಲಿ ಬಂದಿದ್ದ ಧರ್ಮೇಗೌಡ, ರೈಲ್ವೆ ಟ್ರ್ಯಾಕ್ ಬಳಿ ಕಾರನ್ನ ನಿಲ್ಲಿಸಲು ಡ್ರೈವರಿಗೆ ಸೂಚನೆ ನೀಡಿದ್ದಾರೆ.ಇತ್ತ ರೈಲ್ವೆ ಹಳಿಯತ್ತ ಬರುವಾಗ ಹಳ್ಳಿಗರನ್ನ ಮಾತನಾಡಿಸಿ ಬಂದಿದ್ದರು. ಅಲ್ಲದೆ ನನಗೆ ಒಬ್ಬರ ಜೊತೆ ಖಾಸಗಿಯಾಗಿ ಮಾತನಾಡಬೇಕು. ನೀನು ಹೋಗು ಅಂತ ಚಾಲಕನನ್ನು ಕಳುಹಿಸಿದ್ದಾರೆ. ಆ ಬಳಿಕ ಕಡೂರಿನ ವ್ಯಕ್ತಿಯೊಬ್ಬರಿಗೆ ಫೋನ್ ಮಾಡಿ ಜನಶತಾಬ್ದಿ ರೈಲು ಬರುವ ಸಮಯವನ್ನು ವಿಚಾರಿಸಿದ್ದಾರೆ. ನಂತರ ತಮ್ಮ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಬಂದ ರೈಲಿಗೆ ತಲೆಕೊಟ್ಟು ಧರ್ಮೇಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯಿಂದ ಧರ್ಮೇಗೌಡ ಅವರ ಮೃತದೇಹ ಛಿದ್ರಗೊಂಡಿದ್ದು, ಸುಮಾರು 100 ಮೀಟರ್ ದೂರದಲ್ಲಿ ಕೈ ಪತ್ತೆಯಾಗಿದೆ. ಪರಿಷತ್‍ನಲ್ಲಿ ನಡೆದ ಗಲಾಟೆಯಿಂದ ಮನಸ್ಸಿಗೆ ನೋವಾಗಿದೆ. ಮನೆಯಲ್ಲಿನ ಆಸ್ತಿ, ಹಣಕಾಸು ವಿಚಾರ ಡೆತ್‍ನೋಟ್‍ನಲ್ಲಿ ಬರೆದಿದ್ದಾರೆ. ಅಲ್ಲದೆ ಪತ್ನಿ ಮಮತಾ, ಮಗ, ಮಗಳಲ್ಲಿ ಕ್ಷಮೆ ಕೂಡ ಕೇಳಿದ್ದಾರೆ.Sign in to your account
Username or Email Address


Password

 Remember Me


