ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ  (Renukaswamy Murder Case)  ಮೊದಲ ಜಾಮೀನು (Bail) ಮಂಜೂರು ಆಗಿದೆ. ಎ16 ಆಗಿದ್ದ ಕೇಶವಮೂರ್ತಿಗೆ (KeshavMurthy) ಹೈಕೋರ್ಟ್‌ ಜಾಮೀನು  ಮಂಜೂರು ಮಾಡಿದೆ.ರೇಣುಕಾಸ್ವಾಮಿ ಶವ ವಿಲೇವಾರಿಯಲ್ಲಿ ಭಾಗಿಯಾಗಿದ್ದ ಕೇಶವಮೂರ್ತಿಯನ್ನು ಸಾಕ್ಷ್ಯ ನಾಶ ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು. ಕೇಶವಮೂರ್ತಿ ಪರ ವಕೀಲ ರಂಗನಾಥ ರೆಡ್ಡಿ ವಾದಿಸಿದ್ದರು.ಆರಂಭದಲ್ಲಿ ಕೇಶವಮೂರ್ತಿ ಕೊಲೆಯಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು. ಆದರೆ ತನಿಖೆ ವೇಳೆ ಕೊಲೆಯಲ್ಲಿ ಭಾಗಿಯಾಗಿಲ್ಲ. ಸಾಕ್ಷಿನಾಶ ಮಾಡಲು ಮುಂದಾಗಿದ್ದ ವಿಚಾರ ಬೆಳಕಿಗೆ ಬಂದಿತ್ತು. ಹೀಗಾಗಿ ಪೊಲೀಸರು ಸಾಕ್ಷ್ಯನಾಶ ಆಡಿಯಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ಕೊಲೆಯಲ್ಲಿ ನೇರವಾಗಿ ಭಾಗಿಯಾಗದ ಕಾರಣ ಕೇಶವಮೂರ್ತಿಗೆ ಇಂದು ಜಾಮೀನು ಸಿಕ್ಕಿದೆ.ಯಾರು ಈ ಕೇಶವಮೂರ್ತಿ?
ಗಿರಿನಗರದ ಹೀರಣ್ಣನಗುಡ್ಡದ ಕೇಶವಮೂರ್ತಿ, ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ. ನಟ ದರ್ಶನ್ ಅಭಿಮಾನಿಯಾಗಿದ್ದ ಆತ ಅದೇ ಅಭಿಮಾನದಲ್ಲೇ ಕೊಲೆ ಪ್ರಕರಣದ ಆರೋಪ ಹೊತ್ತು ಜೈಲಿಗೆ ಹೋಗಲು ಸಹ ಸಿದ್ದನಾಗಿದ್ದ.ದರ್ಶನ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಪವನ್ ಮೂಲಕ ಈ ಕೃತ್ಯದಲ್ಲಿ ಕೇಶವ ಸಿಲುಕಿದ್ದ. ಹಣದಾಸೆ ತೋರಿಸಿ ದರ್ಶನ್ ಹೆಸರು ಹೇಳದೆ ಪೊಲೀಸರಿಗೆ ಶರಣಾಗುವಂತೆ ದರ್ಶನ್ ಆಪ್ತರು ಸೂಚಿಸಿದ್ದರು. ಅದರಂತೆ ಕಾಮಾಕ್ಷಿಪಾಳ್ಯ ಠಾಣೆಗ ಬಂದು ಕೇಶವ ಮೂರ್ತಿ ಶರಣಾಗಿದ್ದ ಪೊಲೀಸರ ವಿಚಾರಣೆ ವೇಳೆ ಕೊಲೆ ರಹಸ್ಯವನ್ನು ಬಾಯ್ದಿಟ್ಟಿದ್ದ. ಈತನ ಹೇಳಿಕೆ ಆಧರಿಸಿಯೇ ತನಿಖೆ ದಿಕ್ಕು ಬದಲಾಗಿತ್ತು.Sign in to your account
Username or Email Address


Password

 Remember Me


