ಬೆಂಗಳೂರು: ರಾಜ್ಯದಲ್ಲಿ ತುಪ್ಪ (Ghee) ಉತ್ಪಾದನೆ ಗುಣಮಟ್ಟ ಪರಿಶೀಲನೆಗೆ ಆರೋಗ್ಯ ಇಲಾಖೆ ಮುಂದಾಗಿದೆ. ಈ ಬಗ್ಗೆ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ (Health Department) ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸೂಚನೆ ನೀಡಿದ್ದಾರೆ.ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತುಪ್ಪದ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಪರಿಶೀಲನೆಗೆ ಒಳಪಡಿಸುವಂತೆ ಸೂಚನೆ ನೀಡಲಾಗಿದೆ. ನಂದಿನಿ‌ ಹೊರತುಪಡಿಸಿ ಉಳಿದ ತುಪ್ಪದ ಸ್ಯಾಂಪಲ್‌ಗಳ ಪರಿಶೀಲನೆಗೆ‌ ನಿರ್ಧರಿಸಲಾಗಿದೆ. ತುಪ್ಪದ ಗುಣಮಟ್ಟ ಕಾಪಾಡಲು ಈ ಕ್ರಮಕೈಗೊಳ್ಳಲಾಗಿದೆ. ಪ್ರಸಾದಗಳ ಸ್ಯಾಂಪಲ್ ಪರಿಶೀಲನೆ ಅಲ್ಲ, ನೇರವಾಗಿ ತುಪ್ಪದ ಪರಿಶೀಲನೆಗೆ ಆರೋಗ್ಯ ಇಲಾಖೆ ಮುಂದಾಗಿದೆ ಎಂದು ತಿಳಿಸಿದ್ದಾರೆ.ಆಹಾರ ಸುರಕ್ಷತಾ ಆಯುಕ್ತರಿಗೆ ಈ ಬಗ್ಗೆ ಹೇಳಿದ್ದೇನೆ. ರಾಜ್ಯದಲ್ಲಿ ಬಳಸುತ್ತಿರುವ ತುಪ್ಪದ ಬಗ್ಗೆ ತಪಾಸಣೆ ಮಾಡಲು ಸೂಚನೆ ನೀಡಿದ್ದೇನೆ. ಈಗಾಗಲೇ ಸ್ಯಾಂಪಲ್ ಸಂಗ್ರಹಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ತಿರುಪತಿಯಲ್ಲಿ ಆದ ರೀತಿ ಕೊಬ್ಬಿನ ಅಂಶಗಳು ಇಲ್ಲಿ ಬಳಕೆಯಾಗುತ್ತಿರುವ ತುಪ್ಪದಲ್ಲಿ ಇದೆಯೇ ಎಂದು ನೋಡುತ್ತಿದ್ದೇವೆ. ತಮಿಳುನಾಡು ಸೇರಿದಂತೆ ಬೇರೆ ಬೇರೆ ರಾಜ್ಯಗಳಿಂದ ಇಲ್ಲಿಗೆ ತುಪ್ಪ ಬರುತ್ತದೆ. ಎಲ್ಲಾ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಪರಿಶೀಲಿಸಲು ಹೇಳಿದ್ದೇನೆ ಎಂದು ತಿಳಿಸಿದ್ದಾರೆ.ಪ್ರಸಾದದ ಪರಿಶೀಲನೆ ನಾವು ಮಾಡುತ್ತಿಲ್ಲ ಬೇರೆ ಪದಾರ್ಥಗಳಲ್ಲಿ ಕಲಬೆರಕೆ ಆಗುವ ಸಾಧ್ಯತೆ ಕಡಿಮೆ. ಆದರೆ ಆಂಧ್ರ ಮುಖ್ಯಮಂತ್ರಿ ತುಪ್ಪದಲ್ಲಿ ಬೇರೆ ಬೇರೆ ಕೊಬ್ಬಿನಾಂಶ ಇತ್ತು ಎಂದು ಹೇಳಿರುವುದು ಆತಂಕಕಾರಿಯಾದ ವಿಚಾರವಾಗಿದೆ. ಒಬ್ಬ ಸಿಎಂ ಹೇಳಿದ ಮೇಲೆ ನಾವು ಅದನ್ನು ಗಂಭೀರವಾಗಿ ಪರಿಗಣಿಸಬೇಕು. ದೇವರ ಬಗ್ಗೆ ಶ್ರದ್ಧೆ ಇರೋರಿಗೆ ಈ ವಿಚಾರ ಬಹಳ ಆಘಾತಕಾರಿಯಾಗಿದೆ. ಹೀಗಾಗಿ ರಾಜ್ಯದಲ್ಲಿ ಪರಿಶೀಲನೆ ಮಾಡಿ ಎಂದು ಹೇಳಿದ್ದೇವೆ. ವರದಿಯಲ್ಲಿ ಏನು ಬರುತ್ತೆ ಎಂದು ತಿಳಿದುಕೊಳ್ಳೋಣ. ಯಾಕೆಂದರೆ ಜನರಿಗೆ ಈ ವಿಚಾರದಲ್ಲಿ ಬಹಳ ಗೊಂದಲ ಶುರುವಾಗಿದೆ ಎಂದಿದ್ದಾರೆ.ತಿರುಪತಿ ಲಡ್ಡು (Tirupati Laddu Row) ವಿಚಾರದಲ್ಲಿ ಈ ರೀತಿ ಇದೆ ಅಂತ ಆದಾಗ ಯಾರನ್ನು ನಂಬಬೇಕು ಎನ್ನುವ ಪ್ರಶ್ನೆ ಎದುರಾಗಿದೆ. ನಾಳೆ ಪ್ರಸಾದವನ್ನು ಸ್ವೀಕರಿಸದೆ ಇರುವಂತಹ ಪರಿಸ್ಥಿತಿ ಹೋಗಬಹುದು. ಹಾಗಾಗಿ ನಮ್ಮ ಕಡೆಯಿಂದ ಪರಿಶೀಲನೆ ಮಾಡಿಸುತ್ತಿದ್ದೇವೆ. ಮೊದಲು ವರದಿ ಬರಲಿ ಬಳಿಕ ಮುಂದಿನ ಕ್ರಮ ತೀರ್ಮಾನ ಮಾಡ್ತೇವೆ ಎಂದಿದ್ದಾರೆ.Sign in to your account
Username or Email Address


Password

 Remember Me


