ಬೆಂಗಳೂರು: ವ್ಯಕ್ತಿಯೊಬ್ಬ ರಸ್ತೆಯಲ್ಲಿ ಅಟ್ಟಾಡಿಸಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ರಾಜಗೋಪಾಲನಗರದ ಲವಕುಶನಗರದಲ್ಲಿ ನಡೆದಿದೆ.ಹೇಮಾ ಕೊಲೆಯಾದ ದುರ್ದೈವಿ. ಆರೋಪಿ ಪತಿ ಮಂಜುನಾಥ್ ರಸ್ತೆಯಲ್ಲಿ ಅಟ್ಟಾಡಿಸಿ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಕುಣಿಗಲ್ ಮೂಲದ ಹೇಮಾಗೆ ಆರೋಪಿ ಮಂಜುನಾಥ್ ಜೊತೆ 12 ವರ್ಷಗಳ ಹಿಂದೆ ಮದುವೆಯಾಗಿತ್ತು. ಮೃತ ಹೇಮಾ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡಿಕೊಂಡಿದ್ದಳು. ಮಂಗಳವಾರ ಸಂಜೆ ಹೇಮಾ ಪತಿಯ ವಿರುದ್ಧ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಳು. ಅದೇ ವಿಚಾರವಾಗಿ ಮನೆಯಲ್ಲಿ ಗಲಾಟೆ ಆಗಿದೆ.ಈ ವೇಳೆ ಆರೋಪಿ ಹೇಮಾಗೆ ಚಾಕುವಿನಿಂದ ಇರಿದಿದ್ದಾನೆ. ನಂತರ ಗಾಬರಿಯಿಂದ ಪತ್ನಿ ಮನೆಯಿಂದ ಹೊರಗೆ ಓಡಿ ಬಂದಿದ್ದಾಳೆ. ಆದರೆ ಪತಿ ಆಕೆಯನ್ನು ಹಿಂಬಾಲಿಸಿಕೊಂಡು ಮನೆಯಿಂದ ಬೀದಿಗೆ ಬಂದಿದ್ದಾನೆ. ಅಲ್ಲದೇ ಬೀದಿಯಲ್ಲಿ ಅಟ್ಟಾಡಿಸಿ ಪತ್ನಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. ಬಳಿಕ ಆರೋಪಿ ಮಂಜುನಾಥ್ ಎಸ್ಕೇಪ್ ಆಗಿದ್ದಾನೆ.ಮಾಹಿತಿ ತಿಳಿದು ರಾಜಗೋಪಾಲನಗರ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸದ್ಯಕ್ಕೆ ಈ ಕುರಿತು ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


