ರಾಮನಗರ: ಮಾಗಡಿ ಜೆಡಿಎಸ್ ಶಾಸಕ ಎ.ಮಂಜುನಾಥ್‍ಗೂ ಕೊರೊನಾ ಭೀತಿ ಶುರುವಾಗಿದೆ.ಶಾಸಕ ಎ.ಮಂಜುನಾಥ್ ಅವರ ಆಪ್ತ ಕಾರ್ಯದರ್ಶಿ ಹಾಗೂ ಮತ್ತೋರ್ವ ಸ್ನೇಹಿತ ಒಕ್ಕಲಿಗರ ಸಂಘದ ನಿರ್ದೇಶಕರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸೋಂಕು ಪಾಸಿಟಿವ್ ಬಂದಿರುವ ಇಬ್ಬರು ಕೂಡ ಶಾಸಕರ ಜೊತೆಗಿದ್ದವರು, ಈ ಹಿನ್ನೆಲೆಯಲ್ಲಿ ಎ.ಮಂಜುನಾಥ್ ಅವರು ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ.ಶಾಸಕರ ಆಪ್ತ ಕಾರ್ಯದರ್ಶಿಗೆ ಬೆಂಗಳೂರಿನ ರಾಜರಾಜೇಶ್ವರಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಈ ಬಗ್ಗೆ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಪೋಸ್ಟ್ ಹಾಕಿಕೊಳ್ಳುವ ಮೂಲಕ ತಾನು ಹೋಂ ಕ್ವಾರಂಟೈನ್ ಆಗಿರುವ ಬಗ್ಗೆ ತಿಳಿಸಿದ್ದಾರೆ. ಜೊತೆಗೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ನಾಳೆ ಶಾಸಕರ ಪರೀಕ್ಷಾ ವರದಿ ಬರುವ ಸಾಧ್ಯತೆಯಿದೆ. ಜೊತೆಗೆ ನಾನು ಕ್ವಾರಂಟೈನ್ ಆಗುತ್ತಿದ್ದು, ಜನರು ನನ್ನನ್ನು ದೂರವಾಣಿ ಮೂಲಕ ಸಂಪರ್ಕ ಮಾಡಬಹುದು ಎಂದು ಹೇಳಿದ್ದಾರೆ.Sign in to your account
Username or Email Address


Password

 Remember Me


