ಹಾವೇರಿ: ಜಿಲ್ಲೆಯಲ್ಲಿ ಕೊರೊನಾ ಆರ್ಭಟಕ್ಕೆ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸಾವಿನ ಖಾತೆಯನ್ನು ತೆರೆದಿದೆ.ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ದೇಸಾಯಿ ಗಲ್ಲಿ ನಿವಾಸಿಯಾಗಿದ್ದ 75 ವರ್ಷದ ವೃದ್ಧೆ (ರೋಗಿ-8295) ಮೃತಪಟ್ಟಿದ್ದಾರೆ. ಮೃತ ವೃದ್ಧೆಗೆ ರೋಗಿ-6832ರ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿತ್ತು. ಜೂನ್ 19ರಂದು ಕೋವಿಡ್ ಆಸ್ಪತ್ರೆಗೆ ವೃದ್ಧೆಯನ್ನು ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ವೃದ್ಧೆ ಸಾವನ್ನಪ್ಪಿದ್ದಾರೆ.ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದ 60 ವರ್ಷದ ವೃದ್ಧೆಗೆ ಸೋಮವಾರ ಸೋಂಕು ದೃಢಪಟ್ಟಿತ್ತು. ಜೂನ್ 24,ರಂದು ಕೆಮ್ಮು, ಜ್ವರದಿಂದ ಬಳಲುತ್ತಿದ್ದ ವೃದ್ಧೆಯನ್ನು (ರೋಗಿ-13,268) ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಜೂನ್ 28,ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಇವತ್ತು ಚಿಕಿತ್ಸೆ ಫಲಿಸದೆ ಮೃತಪಟ್ಟ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಹೇಳಿದ್ದಾರೆ.ಜಿಲ್ಲಾಡಳಿತ ಸರ್ಕಾರದ ನಿರ್ದೇಶನದಂತೆ ಅಂತ್ಯಕ್ರಿಯೆಯನ್ನ ಮಾಡಲಾಗುತ್ತದೆ. ಅಂತ್ಯಕ್ರಿಯೆಯಲ್ಲಿ ಮೃತರ ಕುಟುಂಬದ ಐವರಿಗೆ ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ .Sign in to your account
Username or Email Address


Password

 Remember Me


