ಕಲಬುರಗಿ: ಹಿರಿಯ ಸಾಹಿತಿ ಗಿತಾ ನಾಗಭೂಷಣ್ (78) ಹೃದಯಾಘಾತದಿಂದ ನಿಧನರಾಗಿದ್ದಾರೆ.ಕಳೆದು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗೀತಾ ನಾಗಭೂಷಣ್ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಗೀತಾ ನಾಗಭೂಷಣ ನಿಧನಾರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಗೀತಾ ನಾಗಭೂಷಣ್ ಕಲಬುರಗಿಯ ಸ್ವಸ್ತಿಕ ನಗರದಲ್ಲಿ ವಾಸವಾಗಿದ್ದರು. ಶೋಷಿತರ ಪರವಾಗಿ ಬರವಣಿಗೆ ಮೂಲಕ ಗೀತಾ ನಾಗಭೂಷಣ್ ಧ್ವನಿ ಎತ್ತಿದ್ದರು. ಅದರಲ್ಲಿ ಶೋಷಿತ ಮಹಿಳೆಯರ ಪರವಾಗಿ ಧ್ವನಿ ಎತ್ತಿ ಸರ್ಕಾರದ ಕಣ್ಣತೆರಸುವ ಕೆಲಸವನ್ನು ಸಹ ಗೀತಾ ನಾಗಭೂಷಣ್ ಮಾಡುತ್ತಿದ್ದರು.2010 ರಲ್ಲಿ ಗದಗ ನಗರದಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ನಾಡೊಜ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿ ಹೆಗ್ಗಳಿಕೆ ಪಾತ್ರವಾಗಿದ್ದರು. ಗೀತಾ ನಾಗಭೂಷಣ್ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಮಹಿಳಾ ಸಾಹಿತಿ. ಇವರ ಬದುಕು ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ ಅಲ್ಲದೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮೊದಲ ಮಹಿಳಾ ಸಾಹಿತಿ ಆಗಿದ್ದಾರೆ.Sign in to your account
Username or Email Address


Password

 Remember Me


