ಬೆಂಗಳೂರು: ಪಕ್ಕದ ಮನೆಯವರೆಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಶಾಸಕ ಪ್ರಿಯಾಂಕ್ ಖರ್ಗೆ ಸ್ವತಃ ತಾವೇ ಐಸೊಲೇಷನ್‍ಗೆ ಒಳಗಾಗಿದ್ದಾರೆ.ಈ ವಿಚಾರವಾಗಿ ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕಿರುವ ಪ್ರಿಯಾಂಕ್ ಖರ್ಗೆ, ಬೆಂಗಳೂರಿನ ನನ್ನ ನಿವಾಸದ ಪಕ್ಕದ ಮನೆಯವರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ನಾನು ಕೂಡ ಐಸೊಲೇಷನ್‍ಗೆ ಒಳಪಡುವ ಅನಿವಾರ್ಯತೆ ಎದುರಾಗಿದೆ ಎಂದು ತಿಳಿಸಿದ್ದಾರೆ.https://www.facebook.com/priyank.kharge.5/posts/3211694922231464ಈ ಸಮಯದಲ್ಲಿ ನಾನು ಯಾರನ್ನೂ ಖುದ್ದಾಗಿ ಭೇಟಿ ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ತಮ್ಮ ಸುರಕ್ಷತೆಯ ದೃಷ್ಟಿಯಿಂದ ನನ್ನನ್ನು ನಿವಾಸದ ಬಳಿ ಭೇಟಿ ಮಾಡಲು ತಾವು ಮುಂದಾಗಬಾರದೆಂದು ವಿನಂತಿಸಿಕೊಳ್ಳುತ್ತೇನೆ. ಆದ್ದರಿಂದ ಯಾವುದೇ ಸಮಸ್ಯೆ ಅಥವಾ ಸಲಹೆಗಳಿದ್ದರೆ, ನನ್ನನ್ನು ಭೇಟಿ ಮಾಡುವ ಬದಲು ನೇರವಾಗಿ ನನಗೆ ಕರೆ ಮಾಡಿ ಚರ್ಚಿಸಲು ಕೋರಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.Sign in to your account
Username or Email Address


Password

 Remember Me


