ಬೆಂಗಳೂರು: ರಾಜ್ಯದಲ್ಲಿಂದು ಅತಿ ಹೆಚ್ಚು ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿದ್ದು, 1,267 ಮಂದಿಗೆ ಹೆಮ್ಮಾರಿ ಸೋಂಕು ತಗುಲಿದೆ. ಇನ್ನು ಸಿಲಿಕಾನ್ ಸಿಟಿಯಲ್ಲಿ 783 ಪ್ರಕರಣಗಳು ವರದಿಯಾಗಿವೆ. ಡೆಡ್ಲಿ ವೈರಸ್ ವ್ಯೂಹಕ್ಕೆ ಬೆಂಗಳೂರು ಸಿಲುಕಿರೋದು ಖಚಿತವಾಗಿದೆ. ಇವತ್ತು ಒಂದೇ ದಿನ 16 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ.ಇಂದು ಬಿಡುಗಡೆಯಾದ ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬೆಂಗಳೂರು ನಗರ 783, ದಕ್ಷಿಣ ಕನ್ನಡ 97, ಬಳ್ಳಾರಿ 71, ಉಡುಪಿ 40, ಕಲಬುರಗಿ 34, ಹಾಸನ 31, ಗದಗ 30, ಬೆಂಗಳೂರು ಗ್ರಾಮಾಂತರ 27, ಧಾರವಾಡ 18, ಮೈಸೂರು 18, ಬಾಗಲಕೋಟೆ 17, ಉತ್ತರ ಕನ್ನಡ 14, ಹಾವೇರಿ 12, ಕೋಲಾರ 11, ಬೆಳಗಾವಿ 8, ಬೀದರ್ 7, ಚಿತ್ರದುರ್ಗ 7, ರಾಯಚೂರು 6, ಮಂಡ್ಯ 6, ದಾವಣಗೆರೆ 6, ವಿಜಯಪುರ 5, ಶಿವಮೊಗ್ಗ 4, ಚಿಕ್ಕಬಳ್ಳಾಪುರ, ಕೊಪ್ಪಳ, ಚಿಕ್ಕಮಗಳೂರು, ಕೊಡಗು ತಲಾ ಮೂರು, ತುಮಕೂರು 2 ಮತ್ತು ಯಾದಗಿರಿಯಲ್ಲಿ ಒಂದು ಪ್ರಕರಣ ಬೆಳಕಿಗೆ ಬಂದಿವೆ.Evening Media Bulletin 28/06/2020.Please click on the link below to view bulletin.https://t.co/Y0INsF2O7T@BMTC_BENGALURU @NammaBESCOM @tv9kannada @publictvnews @suvarnanewstv @timesofindia @prajavani @udayavani_web @TV5kannada @Vijaykarnataka @VVani4U pic.twitter.com/o9hcDuH3wA— K'taka Health Dept (@DHFWKA) June 28, 2020ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 13,190ಕ್ಕೇರಿಕೆಯಾಗಿದ್ದು, ಇಂದು 16 ಮಂದಿ ಸಾವನ್ನಪ್ಪಿದ್ದಾರೆ. 220 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ರಾಜ್ಯದಲ್ಲಿ 5,472 ಸಕ್ರಿಯ ಕೊರೊನ ಪ್ರಕರಣಗಳಿವೆ. ಐಸಿಯುವಲ್ಲಿ 243 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.Sign in to your account
Username or Email Address


Password

 Remember Me


