ಮಂಗಳೂರು: ನಗರದ ಉಳ್ಳಾಲ ವ್ಯಾಪ್ತಿಯಲ್ಲಿ ಕೊರೊನಾ ಪಾಸಿಟಿವ್ ವರದಿಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತ ಪ್ರದೇಶದಲ್ಲಿ ರ‌್ಯಾಂಡಮ್ ಟೆಸ್ಟ್ ನಡೆಸಲು ನಿರ್ಧರಿಸಲಾಗಿದೆ.ಶಾಸಕ ಯು.ಟಿ.ಖಾದರ್ ನೇತೃತ್ವದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಧಾರ್ಮಿಕ ಮುಖಂಡರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಉಳ್ಳಾಲದಲ್ಲಿ ಓರ್ವ ವೃದ್ಧ ಮಹಿಳೆ ಕೊರೊನಾದಿಂದ ಸಾವನ್ನಪ್ಪಿದ್ದು, ಜೊತೆಗೆ ಇಬ್ಬರು ಪೊಲೀಸರು ಸೇರಿ ಐದು ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಇಲ್ಲಿನ ನಾಗರಿಕರಲ್ಲಿ ಆತಂಕ ಹೆಚ್ಚಿಸಿದೆ.ಈ ಹಿನ್ನಲೆಯಲ್ಲೇ ರ‌್ಯಾಂಡಮ್ ಟೆಸ್ಟ್ ಗೆ ನಿರ್ಧರಿಸಿದ್ದು ಉಳ್ಳಾಲದ ಮೀನುಗಾರರು, ಆಟೋ ಚಾಲಕರು, ಬೀದಿ ಬದಿ ವ್ಯಾಪಾರಸ್ಥರು ಸೇರಿ ಎಲ್ಲರ ರ್ಯಾಂಡಮ್ ಟೆಸ್ಟ್ ನಡೆಸಲಾಗುವುದು. ಇದರೊಂದಿಗೆ ಸೊಂಕು ಹೆಚ್ಚಿರುವ ಪ್ರದೇಶದ ಹಲವು ಮಸೀದಿಗಳಲ್ಲಿ ಸಾಮೂಹಿಕ ನಮಾಜ್ ನಡೆಸೋದನ್ನೂ ಸ್ಥಗಿತಗೊಳಿಸಲಾಗಿದೆ.Sign in to your account
Username or Email Address


Password

 Remember Me


