ಬೀದರ್: ರಾಜ್ಯದಲ್ಲಿ ಜನರು ಹೆಚ್ಚು ಓಡಾಡುವ ಏರಿಯಾಗಳನ್ನು ಲಾಕ್ ಡೌನ್ ಮಾಡಲಾಗುತ್ತೆ. ಆದರೆ ಬೆಂಗಳೂರನ್ನು ಸಂಪೂರ್ಣವಾಗಿ ಲಾಕ್ ಡೌನ್ ಮಾಡಲ್ಲ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.ಬೀದರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಸಿಟಿ ಮಾರ್ಕೆಟ್, ತರಕಾರಿ ಮಾರ್ಕೆಟ್, ದಿನಸಿ ಮಾರ್ಕೆಟ್ ಗಳನ್ನು ಲಾಕ್ ಡೌನ್ ಮಾಡಲಾಗುತ್ತೆ. ಎಲ್ಲಿ ಹೆಚ್ಚು ಪಾಸಿಟಿವ್ ಕೇಸ್ ಬರುತ್ತೆ ಅಲ್ಲಿ ಲಾಕ್ ಡೌನ್, ಸೀಲ್ ಡೌನ್ ಮಾಡಲು ರಾಜ್ಯ ಸರ್ಕಾರ ಮುಂಜಾಗ್ರತೆ ತೆಗೆದುಕೊಂಡಿದೆ ಎಂದರು.ಹೊರಗಡೆಯಿಂದ ಬರುತ್ತಿರುವವರಿಗೆ ಸೋಂಕು ಜಾಸ್ತಿಯಾಗುತ್ತಿದ್ದು ಇದನ್ನು ನಿಯಂತ್ರಣ ಮಾಡಲು ಆಗುತ್ತಿಲ್ಲ. ಹೀಗಾಗಿ 15 ದಿನಗಳಿಂದ ರಾಜ್ಯದಲ್ಲಿ ಸೋಂಕು ಜಾಸ್ತಿಯಾಗುತ್ತಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಆರ್ಥಿಕತೆ ಒಂದೇ ನೋಡುತ್ತಿಲ್ಲ. ಜನರ ಆರೋಗ್ಯವನ್ನು ಕೂಡ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ತಿಳಿಸಿದರು.Sign in to your account
Username or Email Address


Password

 Remember Me


