ಬೆಂಗಳೂರು: ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ ಅಗಲಿಕೆಯ ನೆನಪಿನಲ್ಲಿಯೇ ಪತ್ನಿ ನಟಿ ಮೇಘನಾ ರಾಜ್ ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದರು. ಇದೀಗ ಮೇಘನಾ ಫೇಸ್‍ಬುಕ್ ಪೇಜಿನಲ್ಲಿ ಪ್ರೊಫೈಲ್ ಫೋಟೋ ಕೂಡ ಚೇಂಜ್ ಮಾಡಿದ್ದಾರೆ. ಇದನ್ನೂ ಓದಿ: ನಿಮ್ಮ ಪ್ರೀತಿಯೇ ನನಗೆ ಆಸರೆ, ರಕ್ಷಾಕವಚ – ಅಭಿಮಾನಿಗಳ ಬಗ್ಗೆ ಮೇಘನಾ ಮಾತುನಟಿ ಮೇಘನಾ ಫೇಸ್‍ಬುಕ್ ಪೇಜಿನಲ್ಲಿ ಇಷ್ಟು ದಿನ ಅವರ ಫೋಟೋ ಮಾತ್ರ ಇತ್ತು. ಆದರೆ ಈಗ ಪತಿಯ ನೆನಪಿನಲ್ಲಿ ಪ್ರೊಫೈಲ್ ಫೋಟೋ ಬದಲಾಯಿಸಿದ್ದಾರೆ. ನೂತನವಾಗಿ ಅಪ್‍ಡೇಟ್ ಮಾಡಿರುವ ಫೋಟೋದಲ್ಲಿ ಚಿರು ಮತ್ತು ಮೇಘನಾ ಕಾರಿನಲ್ಲಿ ಕುಳಿತಿದ್ದು, ಇಬ್ಬರು ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ಸೆಲ್ಫಿ ಸಿಕ್ಕಿಸಿಕೊಂಡಿದ್ದಾರೆ. ಇಬ್ಬರು ಜೊತೆಯಾಗಿ ಕ್ಯೂಟ್ ಆಗಿ ನಗುತ್ತಿರುವುದನ್ನು ಕಾಣಬಹುದಾಗಿದೆ. ಮೇಘನಾ ಪ್ರೊಫೈಲ್ ಫೋಟೋ ಚೇಂಜ್ ಮಾಡಿದ ತಕ್ಷಣ ಅಭಿಮಾನಿಗಳು ಕಮೆಂಟ್ ಮಾಡುವ ಮೂಲಕ ಸಾಂತ್ವನ ಹೇಳುತ್ತಿದ್ದಾರೆ. ಇತ್ತೀಚೆಗಷ್ಟೆ ಮೇಘನಾ ಚಿರು ನೆನಪಿನಲ್ಲಿ ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ.ಇನ್‍ಸ್ಟಾಗ್ರಾಂ ಖಾತೆಯಲ್ಲಿ ಇಷ್ಟು ದಿನ ಮೇಘನಾ ರಾಜ್ ಎಂದು ಮಾತ್ರ ಇತ್ತು. ಆದರೆ ಈಗ ಚಿರು ನೆನಪಿನಲ್ಲಿ ತಮ್ಮ ಹೆಸರನ್ನು ಎಡಿಟ್ ಮಾಡಿದ್ದು, ಅದರಲ್ಲಿ ಸರ್ಜಾ ಕುಟುಂಬದ ಸರ್ ನೇಮ್ ಸೇರಿಸಿಕೊಂಡಿದ್ದಾರೆ. ಹೀಗಾಗಿ ಈಗ ‘ಮೇಘನಾ ರಾಜ್ ಸರ್ಜಾ’ ಎಂದು ಬದಲಾಯಿಸಿಕೊಂಡಿದ್ದಾರೆ. ಈ ಮೂಲಕ ಮೇಘನಾ ತಮ್ಮ ಪತಿ ಚಿರಂಜೀವಿ ಸರ್ಜಾ ಹೆಸರನ್ನು ತಮ್ಮ ಹೆಸರಿನ ಜೊತೆಗೆ ಶಾಶ್ವತವಾಗಿ ನೆನಪಿಸುವಂತೆ ಮಾಡಿಕೊಂಡಿದ್ದಾರೆ.ಚಿರು ಸಾವಿನ ನಂತರ ಮೇಘನಾ ರಾಜ್ ತಮ್ಮ ಭಾವನೆಗಳನ್ನು ಇನ್‍ಸ್ಟಾಗ್ರಾಂ ಮೂಲಕ ಹೇಳಿಕೊಂಡಿದ್ದರು. ಮೊದಲಿಗೆ ತನ್ನ ಪತಿಯ ಬಗ್ಗೆ ಸುದೀರ್ಘವಾಗಿ ಬರೆದು ಪೋಸ್ಟ್ ಮಾಡಿದ್ದರು. ಮತ್ತೊಂದು ಪೋಸ್ಟ್ ಮಾಡಿ, ಕಷ್ಟದ ದಿನಗಳಲ್ಲಿ ತಮ್ಮ ಜೊತೆಗಿದ್ದ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದರು.Sign in to your account
Username or Email Address


Password

 Remember Me


