ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದ ಬಳಿ ನಡೆದಿದೆ.ಬೆಂಗಳೂರು ಮೂಲದ ಮಂಜುನಾಥ್(30) ಮುತ್ತು ರಾಜ್ (28) ಮೃತ ದುರ್ದೈವಿಗಳು. ಘಟನೆಯಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.ಲಾಕ್‍ಡೌನ್ ಸಡಿಲವಾದ ಹಿನ್ನೆಲೆಯಲ್ಲಿ ಮಂಜುನಾಥ್ ಹಾಗೂ ಸ್ನೇಹಿತರು ಧರ್ಮಸ್ಥಳಕ್ಕೆ ಹೊರಟಿದ್ದರು. ಆದರೆ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದ ಬಳಿ ವೇಗವಾಗಿ ಬಂದ ಕಾರು ಚಾಲಕ ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಷ್ಟೇ ಅಲ್ಲದೆ ಪಲ್ಟಿ ಹೊಡೆದು ರಸ್ತೆಗೆ ಉಜ್ಜಿಕೊಂಡ ಹೋದ ಪರಿಣಾಮ ಕಿಡಿ ಹಾರಿತ್ತು. ಅದೃಷ್ಟವಶಾತ್ ಬೆಂಕಿ ಹೊತ್ತಿಕೊಂಡಿಲ್ಲ.ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದೇ ರಸ್ತೆ ಮಾರ್ಗವಾಗಿ ಹೋಗುತ್ತಿದ್ದ ಕೆಲವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ದೌಡಾಯಿಸಿದ ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸು ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.Sign in to your account
Username or Email Address


Password

 Remember Me


