ಬೆಂಗಳೂರು: ಇಂದು ಒಂದೇ ದಿನ 445 ಮಂದಿಗೆ ಸೋಂಕು ದೃಢವಾಗಿದ್ದು, 10 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.ಎಂದಿನಂತೆ ಬೆಂಗಳೂರಿನಲ್ಲಿ ಅತಿ ಹೆಚ್ಚು 144 ಮಂದಿಗೆ ಸೋಂಕು ಬಂದಿದೆ.  ರಾಜ್ಯದಲ್ಲಿ ಒಟ್ಟು 11,005ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು 246 ಮಂದಿ ಬಿಡುಗಡೆಯಾಗಿದ್ದಾರೆ.ಇಂದಿನ 445 ಮಂದಿಯಲ್ಲಿ 65 ಅಂತರಾಜ್ಯ ಪ್ರಯಾಣಿಕರಿದ್ದರೆ, 21 ಮಂದಿ ಅಂತರಾಷ್ಟ್ರೀಯ ಪ್ರಯಾಣಿಕರಿದ್ದಾರೆ. ಐಸಿಯುನಲ್ಲಿರುವ ರೋಗಿಗಳ ಸಂಖ್ಯೆ 178ಕ್ಕೆ ಏರಿಕೆಯಾಗಿದೆ.ಸದ್ಯ 3,905 ಸಕ್ರಿಯ ಪ್ರಕರಣಗಳಿದ್ದು 6,916 ಮಂದಿ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 10 ಮಂದಿ ಮೃತಪಟ್ಟಿದ್ದಾರೆ.ಎಲ್ಲಿ ಎಷ್ಟು ಮಂದಿ?
ಒಟ್ಟು 445 ಮಂದಿಗೆ ಸೋಂಕು ಬಂದಿದೆ. ಬೆಂಗಳೂರು ನಗರ 144, ಬಳ್ಳಾರಿ 47, ಕಲಬುರಗಿ 42, ಕೊಪ್ಪಳ 36, ದಕ್ಷಿಣ ಕನ್ನಡ 33, ಧಾರವಾಡ 30, ರಾಯಚೂರು 14, ಗದಗ 12, ಚಾಮರಾಜನಗರ 11, ಉಡುಪಿ 9, ಯಾದಗಿರಿ 7, ಮಂಡ್ಯ 6, ಉತ್ತರ ಕನ್ನಡ 6, ಬಾಗಲಕೋಟೆ 6, ಶಿವಮೊಗ್ಗ 6, ಕೋಲಾರ 6, ಮೈಸೂರು 5, ಚಿಕ್ಕಮಗಳೂರು 4, ಕೊಡಗು 4, ಹಾಸನ 3, ಬೆಂಗಳೂರು ಗ್ರಾಮಾಂತರ 3, ವಿಜಯಪುರ 2, ತುಮಕೂರು 2, ಹಾವೇರಿ 2, ಬೀದರ್‌, ಬೆಳಗಾವಿ, ದಾವಣಗೆರೆ, ರಾಮನಗರ, ಚಿತ್ರದುರ್ಗದಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ.ಎಲ್ಲಿ ಎಷ್ಟು ಮಂದಿ ಬಿಡುಗಡೆ?
ಇಂದು ಒಟ್ಟು 246 ಮಂದಿ ಬಿಡುಗಡೆಯಾಗಿದ್ದಾರೆ. ಕಲಬುರಗಿ 75, ಬಳ್ಳಾರಿ 38, ದಕ್ಷಿಣ ಕನ್ನಡ 32, ಬೆಂಗಳೂರು ನಗರ 21, ಉಡುಪಿ 17, ಬಾಗಲಕೋಟೆ 13, ಧಾರವಾಡ 13, ರಾಮನಗರ 11, ದಾವಣಗೆರೆ 10, ಕೋಲಾರ 6, ಚಿಕ್ಕಬಳ್ಳಾಪುರ 5, ಶಿವಮೊಗ್ಗ 3, ಬೆಳಗಾವಿ ಮತ್ತು ಮೈಸೂರಿನಲ್ಲಿ ತಲಾ ಒಬ್ಬರು ಬಿಡುಗಡೆಯಾಗಿದ್ದಾರೆ.Sign in to your account
Username or Email Address


Password

 Remember Me


