ಹಾಸನ: ಕೊರೊನಾ ವೈರಸ್ ಹೆಸರಿನಲ್ಲಿ ರಾಜ್ಯ ಸರ್ಕಾರ ಲೂಟಿ ಮಾಡುತ್ತಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಕಿಡಿಕಾರಿದ್ದಾರೆ.ನಗರದಲ್ಲಿ ಮಾತನಾಡಿದ ಮಾಜಿ ಸಚಿವರು, ಪಬ್ಲಿಕ್ ಹೌಸಿಂಗ್ ಕಮಿಟಿ ಚೇರ್ಮನ್ ಭೇಟಿ ಮಾಡಲು ನಮಗೆ ಅವಕಾಶ ನೀಡುತ್ತಿಲ್ಲ. ಹಾಸನ ಜಿಲ್ಲೆಯ ಜನರು ದಂಗೆ ಎದ್ದರೆ ಈ ಬಿಜೆಪಿ ಸರ್ಕಾರ ಉಳಿಯಲ್ಲ. ಜಿಲ್ಲೆಯ ಜನರ ಶಾಪ ಸರ್ಕಾರಕ್ಕೆ ಒಳ್ಳೆಯದಾಗಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ನಾನು ಲೋಕೋಪಯೋಗಿ ಸಚಿವನಾಗಿದ್ದಾಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಳಿಯ ಎಂಜಿನಿಯರ್ ಅವರನ್ನು ಹುಬ್ಬಳಿಯಲ್ಲೇ ಮುಂದುವರಿಸಿದ್ದೆ, ಜೊತೆಗೆ ಬಡ್ತಿಯನ್ನೂ ಕೊಡಿಸಿದ್ದೆ. ಆದರೆ ಈಗ ಸಿಎಂ ಯಡಿಯೂರಪ್ಪ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಸಿಎಂ ಯಡಿಯೂರಪ್ಪ ಮತ್ತು ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದ ಎಲ್ಲಾ ಕೆಲಸಗಳನ್ನು ಮಾಡಿಕೊಟ್ಟಿದ್ದೇನೆ. ಬಿ.ಎಸ್.ಯಡಿಯೂರಪ್ಪ ಅವರು ಏನ್ ಶಾಶ್ವತವಾಗಿ ಅಧಿಕಾರದಲ್ಲಿ ಇರುತ್ತಾರಾ. ಬಿಜೆಪಿ ಲೂಟಿಕೋರರ ಸರ್ಕಾರವಾಗಿದೆ ಎಂದು ಕಿಡಿಕಾರಿದರು.ಮೊಸಳೆ ಹೊಸಳ್ಳಿ ಎಂಜಿನಿಯರಿಂಗ್ ಕಾಲೇಜು ಹಾಸನಕ್ಕೆ ಸ್ಥಳಾಂತರಿಸಲು ಸರ್ಕಾರ ಆದೇಶ ನೀಡಿದೆ. ಕಾಲೇಜು ಮುಚ್ಚಲ್ಲಾ ಎಂದು ವಿಧಾನಸಭೆಯಲ್ಲಿ ಸಿಎಂ ಉತ್ತರ ಕೊಟ್ಟಿದ್ದಾರೆ. ಅದರಂತೆ ನಡೆಯಬೇಕು. ಇಲ್ಲದಿದ್ದರೆ ಮುಖ್ಯಮಂತ್ರಿಗಳ ಮನೆ ಮುಂದೆ ಧರಣಿ ಕೂರುತ್ತೇವೆ. ಸಿಎಂ ವಿರುದ್ದ ಪ್ರಿವಿಲೇಜ್ ಕಮಿಟಿಗೆ ದೂರು ಸಲ್ಲಿಸುತ್ತೇನೆ. ಎಕ್ಸಿಕ್ಯೂಟಿವ್ ಇಂಜಿನಿಯರ್ ಒಬ್ಬರ ವರ್ಗಾವಣೆಗೆ 50 ಲಕ್ಷ ಪಡೆದಿದ್ದಾರೆ. ಪ್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳಿಗೆ ಬಿಎಸ್‍ವೈ ಸರ್ಕಾರದಲ್ಲಿ ಸ್ಥಾನ ಇಲ್ಲ. ಅಷ್ಟೇ ಅಲ್ಲದೆ ಬಿಜೆಪಿಯವರು ಅಕೌಂಟ್ ಇಲ್ಲದಿರುವ ಹಣವನ್ನ ಹೂಡಿಕೆ ಮಾಡಲು ಕೈಗಾರಿಕೆಗೆ ಮುಕ್ತ ಅವಕಾಶ ನೀಡಿದ್ದಾರೆ ಎಂದು ಗುಡುಗಿದರು.Sign in to your account
Username or Email Address


Password

 Remember Me


