ಬೀದರ್: ಮಹಾಮಾರಿ ಕೊರೊನಾ ದಿನೇ ದಿನೇ ಅಟ್ಟಹಾಸ ಮೆರೆಯುತ್ತಿದ್ದು, ಜಿಲ್ಲೆಯಲ್ಲಿ ಇಂದು ಮತ್ತೆ 8 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.ಬಸವಕಲ್ಯಾಣದಲ್ಲಿ 3, ಚಿಟ್ಟಗುಪ್ಪದಲ್ಲಿ 3 ಹಾಗೂ ಬೀದರ್ ನಲ್ಲಿ 2 ಜಿಲ್ಲೆಯಲ್ಲಿ ಇಂದು ಒಟ್ಟು 8 ಜನರಿಗೆ ಕೊರೋನಾ ಪಾಸಿಟಿವ್ ಧೃಡವಾಗಿವೆ. ಬೀದರ್ ಹಾಗೂ ಚಿಟ್ಟಗುಪ್ಪದಲ್ಲಿ ಕಂಟೈನ್ಮೆಟ್ ಝೋನ್ ಸಂಪರ್ಕದಿಂದ ಸೋಂಕು ಧೃಡವಾಗಿದ್ದರೆ, ಮುಂಬೈನಿಂದ ಬಸವಕಲ್ಯಾಣಕ್ಕೆ ಬಂದ ವಲಸೆ ಕಾರ್ಮಿಕರಿಗೆ ಸೋಂಕು ತಗುಲಿದೆ.ಇಂದು 8 ಜನರಿಗೆ ಸೋಂಕು ಧೃಡವಾಗುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 537ಕ್ಕೆ ಏರಿಕೆಯಾಗಿದೆ. ಇದರಲ್ಲಿ 397 ಜನ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 125 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಾಲೇ ಜಿಲ್ಲೆಯಲ್ಲಿ 15 ಜನರನ್ನು ಮಹಾಮಾರಿ ಬಲಿ ತೆಗೆದುಕೊಂಡಿದೆ. ಪ್ರತಿ ದಿನ ತನ್ನ ನಾಗಾಲೋಟವನ್ನು ಮುಂದುವರಿಸಿದ್ದು, ಡೆಡ್ಲಿ ವೈರಸ್‍ಗೆ ಜಿಲ್ಲೆಯ ಜನ ತೀವ್ರ ಆತಂಕಗೊಂಡಿದ್ದಾರೆ.Sign in to your account
Username or Email Address


Password

 Remember Me


