ಬೆಂಗಳೂರು: ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಕೊರೊನಾ ಮಹಾಮಾರಿ ರಣಕೇಕೆ ಹಾಕುತ್ತಿದ್ದು, ಈ ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ಆಗುತ್ತಾ ಎಂಬ ಪ್ರಶ್ನೆ ಎದ್ದಿತ್ತು. ಆದರೆ ಈ ಮಧ್ಯೆ ಇಂದಿನಿಂದ ಎಸ್‍ಎಸ್‍ಎಲ್ ಸಿ ಪರೀಕ್ಷೆ ನಡೆಯುತ್ತಿದ್ದು, ಹೀಗಾಗಿ ಪರೀಕ್ಷೆ ಮಗಿದ ಬಳಿಕವಷ್ಟೇ ಲಾಕ್ ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ.ಈ ಬಗ್ಗೆ ಹಲವು ಸಚಿವರಿಗೆ ಸ್ಪಷ್ಟ ಸಂದೇಶ ರವಾನೆ ಮಾಡಿರುವ ಸಿಎಂ, ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮುಗಿಯುವ ತನಕ ಲಾಕ್ ಡೌನ್ ಎಲ್ಲಿಯೂ ಇಲ್ಲ. ಇಂದು ಕ್ಯಾಬಿನೆಟ್ ನಲ್ಲಿ ಬರೀ ಚರ್ಚೆ ಅಷ್ಟೇ, ನಿರ್ಧಾರ ಇಲ್ಲ ಎಂದು ಸಂದೇಶದಲ್ಲಿ ತಿಳಿಸಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.ಈ ಬಗ್ಗೆ ಕ್ಯಾಬಿನೆಟ್ ಸಭೆಗೂ ಮುನ್ನ ಮುಖ್ಯಮಂತ್ರಿಗಳು ಮಾಧ್ಯಮಕ್ಕೆ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ. ಜುಲೈ 4ಕ್ಕೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಅಂತ್ಯವಾಗಲಿದೆ. ಹೀಗಾಗಿ ಅಲ್ಲಿಯವರೆಗೆ ಯಾವುದೇ ನಿರ್ಣಯ ಇಲ್ಲ. ವಿದ್ಯಾರ್ಥಿಗಳು ಡೋಂಟ್ ವರಿ. ಯಾವುದೇ ಲಾಕ್ ಡೌನ್ ವಿಚಾರಕ್ಕೆ ತಲೆ ಕೆಡಿಸಿಕೊಳ್ಳಬೇಡಿ. ಜುಲೈ 5ರ ತನಕ ಲಾಕ್ ಡೌನ್ ಬಗ್ಗೆ ನಿರ್ಧಾರ ಮಾಡದಿರಲು ಯಡಿಯೂರಪ್ಪ ತಿರ್ಮಾನಿಸಿದ್ದಾರೆ.Sign in to your account
Username or Email Address


Password

 Remember Me


