ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರಿಗೆ ಕೊರೊನಾ ಸೋಂಕು ತಗುಲಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಈ ಕುರಿತು ಸ್ವತಃ ಅವರೇ ಟ್ವೀಟ್ ಮಾಡುವ ಮೂಲಕ ಸ್ಪಷ್ಟ ಪಡಿಸಿದ್ದಾರೆ.ಡಿ ಬಾಸ್ ಪತ್ನಿ ವಿಜಯಲಕ್ಷ್ಮಿ ಟ್ವೀಟ್ ಮಾಡಿದ್ದು, ನನಗೆ ಕೊರೊನಾ ಸೋಂಕು ತಗುಲಿರುವ ಕುರಿತು ವದಂತಿ ಹಬ್ಬಿದೆ. ಇದು ಸುಳ್ಳು, ನಾನು ಸಂಪೂರ್ಣವಾಗಿ ಆರಾಮಾಗಿದ್ದೇನೆ. ಇಂತಹ ಕಠಿಣ ಸಂದರ್ಭದಲ್ಲಿ ಎಲ್ಲರೂ ಸುರಕ್ಷಿತವಾಗಿರಿ ಎಂದು ಮನವಿ ಮಾಡಿದ್ದಾರೆ.If you’ve heard any rumours that I’ve been tested covid positive .
This is to let you’ll know I’m perfectly fine. Everyone stay safe during these hard times????— Vijayalakshmi (@vijayaananth2) June 24, 2020ದರ್ಶನ್ ಪತ್ನಿ ವಾಸವಿರುವ ಹೊಸಕೆರೆಹಳ್ಳಿಯ ಪ್ರಸ್ಟೀಜ್ ಅಪಾರ್ಟ್‍ಮೆಂಟ್‍ನಲ್ಲಿರುವ ಕೆಲವರಿಗೆ ಕೊರೊನಾ ಸೋಂಕು ತಗುಲಿದೆ ಎಂಬ ಸುದ್ದಿ ಹಬ್ಬಿತ್ತು. ಅಲ್ಲದೆ ಇದೇ ಅಪಾರ್ಟ್‍ಮೆಂಟ್‍ನಲ್ಲಿ ರವಿಶಂಕರ್ ಗೌಡ ಹಾಗೂ ನಟಿ ಪೂಜಾ ಗಾಂಧಿ ಸಹ ವಾಸವಿದ್ದಾರೆ. ಹೀಗಾಗಿ ಈ ಕುರಿತು ಸುದ್ದಿಯಾಗಿತ್ತು. ಡಿ ಬಾಸ್ ಪತ್ನಿಗೂ ಕೊರೊನಾ ಸೋಂಕು ತಗುಲಿದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಹೀಗಾಗಿ ಸ್ವತಃ ವಿಜಯಲಕ್ಷ್ಮಿ ಅವರೇ ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ.Sign in to your account
Username or Email Address


Password

 Remember Me


