ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು, ಭದ್ರತಾ ಸಿಬ್ಬಂದಿ ಮುಖಕ್ಕೆ ಉಗಿದು ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಆರ್.ಟಿ.ನಗರದ ಚಿತ್ರಮಂದಿರದ ಬಳಿ ಆರೋಪಿ ಸುತ್ತಾಡುತ್ತಿದ್ದ ಸಂದರ್ಭದಲ್ಲಿ ಆರೋಪಿಯ ಬಂಧನ ಮಾಡಲಾಗಿದೆ.ಕಾವಲ್ ಭೈರಸಂದ್ರದ ನಿವಾಸಿಯಾಗಿದ್ದ ಆರೋಪಿಗೆ ಕೋವಿಡ್-19 ಪಾಸಿಟಿವ್ ದೃಢವಾದ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ 3ನೇ ಮಹಡಿಯ ಕೊಠಡಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ಇಂದು ಬೆಳಗ್ಗೆ 10:30ಕ್ಕೆ ವೈದ್ಯರಿಗೆ, ಭದ್ರತಾ ಸಿಬ್ಬಂದಿಯ ಮುಖಕ್ಕೆ ಉಗಿದು ಪರಾರಿಯಾಗಿದ್ದ.ವಿಕ್ಟೋರಿಯಾ ಆಸ್ಪತ್ರೆಯಿಂದ ಬಂದ ಆರೋಪಿ ವಾಣಿ ವಿಲಾಸ ಆಸ್ಪತ್ರೆಯ ಕಾಂಪೌಂಡ್ ಹಾರಿ ಪರಾರಿಯಾಗಿದ್ದ. ಕೂಡಲೇ ಪೊಲೀಸರು ಆರೋಪಿಯ ಹುಡುಕಾಟ ಆರಂಭಿಸಿದ್ದರು. ಸಂಜೆ 6 ವೇಳೆ ಆರ್.ಟಿ.ನಗರದ ಚಿತ್ರಮಂದಿರದ ಬಳಿ ಆರೋಪಿ ಸುತ್ತಾಟ ನಡೆಸಿದ್ದ ಮಾಹಿತಿಯನ್ನು ಸ್ಥಳೀಯರು ನೀಡಿದ್ದು, ಕೂಡಲೇ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಕೊರೊನಾ  ಚಿಕಿತ್ಸಾ ವಿಧಾನಕ್ಕೆ ಹೆದರಿ ಆಸ್ಪತ್ರೆಯಿಂದ ಪರಾರಿಯಾಗಿದ್ದ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ.Sign in to your account
Username or Email Address


Password

 Remember Me


