ಹಾವೇರಿ: ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ಹಿನ್ನೆಲೆ ಜೂನ್ 30ರ ವರೆಗೆ ಹೋಟೆಲ್ ಹಾಗೂ ವ್ಯಾಪಾರ ವಹಿವಾಟು ಬಂದ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.ಹೊಟೇಲ್ ಉದ್ಯಮಿಗಳು ಸ್ವಯಂ ಪ್ರೇರಿತವಾಗಿ ಜೂನ್ 30ರ ವರೆಗೆ ವ್ಯಾಪಾರ, ವಹಿವಾಟು ಬಂದ್ ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ ಎರಡು ಗಂಟೆಯವರೆಗೆ ಮಾತ್ರ ದಿನಸಿ ಅಂಗಡಿಗಳನ್ನು ತೆರೆಯಲು ಅಂಗಡಿ ಮಾಲೀಕರು ನಿರ್ಧರಿಸಿದ್ದಾರೆ. ನಿನ್ನೆಯಷ್ಟೇ ಪಿಗ್ಮಿ ಕಲೆಕ್ಟರ್ ಗೆ ಕೊರೊನಾ ಸೋಂಕು ಧೃಡಪಟ್ಟಿದ್ದರಿಂದ ಹಾಗೂ ಶಿಗ್ಗಾಂವಿ ತಾಲೂಕಿನಲ್ಲಿ ಈವರೆಗೆ 20ಕ್ಕೂ ಅಧಿಕ ಕೊರೊನಾ ಪ್ರಕರಣಗಳು ಕಾಣಿಸಿಕೊಂಡಿದ್ದರಿಂದ ಅಂಗಡಿ ಮಾಲೀಕರು ಈ ನಿರ್ಧಾರ ಕೈಗೊಂಡಿದ್ದಾರೆ. ಅಲ್ಲದೆ ಶಿಗ್ಗಾಂವಿ ನಗರವನ್ನು 15 ದಿನಗಳವರೆಗೆ ಲಾಕ್‍ಡೌನ್ ಮಾಡಿ ಆದೇಶ ಹೊರಡಿಸುವಂತೆ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ತಹಶೀಲ್ದಾರ್‍ಗೆ ಹಾಗೂ ಜಿಲ್ಲಾಧಿಕಾರಿ ಕೃಷ್ಣ ವಾಜಪೇಯಿ ಅವರಿಗೆ ಮನವಿ ಮಾಡಿದ್ದಾರೆ.Sign in to your account
Username or Email Address


Password

 Remember Me


