ಮಂಗಳೂರು: ಕೊರೊನಾ ಸೋಂಕಿನಿಂದ ಮೃತಪಟ್ಟ ವೃದ್ಧರೊಬ್ಬರ ಅಂತ್ಯಸಂಸ್ಕಾರವನ್ನು ಪಿಪಿಇ ಕಿಟ್ ಧರಿಸದೇ ಶಾಸಕ ಯು.ಟಿ. ಖಾದರ್ ನಡೆಸಿದ್ದಾರೆ.ಮಂಗಳೂರಿನ ಬೋಳಾರ ಮಸೀದಿಯ ದಫನ ಭೂಮಿಯಲ್ಲಿ ಕೊರೊನಾ ಸೋಂಕಿತನ ಅಂತ್ಯಸಂಸ್ಕಾರ ಮಾಡಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಜೊತೆ ಶಾಸಕ ಖಾದರ್ ಕೂಡ ಅಂತ್ಯಸಂಸ್ಕಾರ ಕಾರ್ಯ ಮಾಡಿದ್ದಾರೆ. ಖಾದರ್ ಮಸೀದಿ ಭೂಮಿಯಲ್ಲಿ ಗುಂಡಿ ತೆಗೆದು ಸ್ವತಃ ಮೃತದೇಹವನ್ನು ಗುಂಡಿಯಲ್ಲಿಟ್ಟು ಮಣ್ಣು ಮುಚ್ಚುವ ಕೆಲಸ ಮಾಡಿದ್ದಾರೆ. ಆದರೆ ಈ ವೇಳೆ ಪಿಪಿಇ ಕಿಟ್ ಧರಿಸದೇ ಅಂತ್ಯ ಸಂಸ್ಕಾರ ಕಾರ್ಯ ನಡೆಸಿದ್ದಾರೆ.ಕೊರೊನಾ ಸೋಂಕಿತನ ಅಂತ್ಯಸಂಸ್ಕಾರ ಮಾಡುವಾಗ ಆರೋಗ್ಯ ಇಲಾಖೆ ಸಿಬ್ಬಂದಿ ಪಿಪಿಇ ಕಿಟ್ ಧರಿಸಿದ್ದರು. ಆದರೆ ಶಾಸಕ ಖಾದರ್ ಪಿಪಿಇ ಕಿಟ್ ಧರಿಸಿಲ್ಲ. ಹೀಗಾಗಿ ಖಾದರ್ ಡೆಡ್ಲಿ ವೈರಸ್ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ ಎನ್ನಲಾಗಿದೆ.ಮಂಗಳವಾರ 70 ವರ್ಷದ ವೃದ್ಧ, ರೋಗಿ 6282 ರೋಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ವೃದ್ಧ ತೀವ್ರ ಉಸಿರಾಟದ ತೊಂದರೆಯಿಂದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ವೃದ್ಧ ಜೂನ್ 7 ರಂದು ಬೆಂಗಳೂರಿನಿಂದ ಆಗಮಿಸಿದ್ದು, ಜೂನ್ 12 ರಂದು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಬಂದಿತ್ತು. ಆದರೆ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಿನ್ನೆ ಸಂಜೆ ವೇಳೆ ಅಂತ್ಯಸಂಸ್ಕಾರ ಮಾಡಲಾಗಿದೆ.Sign in to your account
Username or Email Address


Password

 Remember Me


