ಚಾಮರಾಜನಗರ: ಜಿಲ್ಲೆಯ ಪುಣಜನೂರು ಚೆಕ್‍ಪೋಸ್ಟ್ ನಲ್ಲಿ ಕಾರ್ಯನಿರ್ಹಿಸಿದ್ದ ಪೊಲೀಸ್ ಪೇದೆಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ.ಜಿಲ್ಲೆಯ ಪೊಲೀಸ್ ಪೇದೆಗೆ ಕೊರೊನಾ ಸೋಂಕು ದೃಢವಾಗಿದೆ ಎಂದು ಮೂಲಗಳ ಮಾಹಿತಿ ಖಚಿತ ಮಾಡಿಸಿದ್ದು, ಪುಣಜನೂರು ಚೆಕ್‍ಪೋಸ್ಟ್ ನಲ್ಲಿ ಕಾರ್ಯನಿರ್ವಹಿಸಿದ್ದ 29 ವರ್ಷದ ಪೊಲೀಸ್ ಪೇದೆಗೆ ಕೊರೊನಾ ಸೋಂಕು ತಗುಲಿದೆ. ಇವರು ಹನೂರು ತಾಲೂಕಿನ ರಾಮಾಪುರ ಸಮೀಪದ ಕೂಡ್ಲೂರು ಗ್ರಾಮದವರು ಎಂದು ತಿಳಿದುಬಂದಿದೆ. ಸದ್ಯ, ಪೇದೆಯ ಪ್ರಾಥಮಿಕ ಸಂಪರ್ಕಿತರನ್ನು ಆರೋಗ್ಯ ಇಲಾಖೆ ಪತ್ತೆ ಮಾಡಲಾಗುತ್ತಿದೆ.ಚಾಮರಾಜನಗರ ಪೂರ್ವ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಪೇದೆಗೂ ಸೋಂಕು ದೃಢಪಟ್ಟ ಹಿನ್ನೆಲೆ ಚಾಮರಾಜನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 8ಕ್ಕೇರಿದೆ. ಜಿಲ್ಲೆಯಲ್ಲಿ ಒಬ್ಬರು ಕೊರೊನಾ ಸೋಂಕು ಗೆದ್ದು ಡಿಸ್ಚಾರ್ಜ್ ಆಗಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಮಹಾಮಾರಿ ಹಬ್ಬುತ್ತಿದ್ದು ಹಸಿರು ಜಿಲ್ಲೆ ಎಂಬ ಗರಿ ಹೊಂದಿದ್ದ ಚಾಮರಾಜನಗರವೀಗ ತಲ್ಲಣಿಸುತ್ತಿದೆ.Sign in to your account
Username or Email Address


Password

 Remember Me


