ಯಾದಗಿರಿ: ಬೆಂಗಳೂರಿನಲ್ಲಿ ಕೊರೊನಾ ಸ್ಫೋಟಗೊಂಡಿರುವುದು ಸತ್ಯ ಎಂದು ಹೇಳುವ ಮೂಲಕ ರಾಜ್ಯ ರಾಜಧಾನಿಯಲ್ಲಿ ಕೊರೊನಾ ನಿರ್ವಹಣೆಯ ನಿರ್ಲಕ್ಷ್ಯದ ಬಗ್ಗೆ ಸಚಿವ ಭೈರತಿ ಬಸವರಾಜ್ ಮಾತನಾಡಿದ್ದಾರೆ.ಯಾದಗಿರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಬಳಿಕ ಮಾತಾಡಿದ ಅವರು, ರಾಜ್ಯ ರಾಜಧಾನಿಗೆ ಬೇರೆ ರಾಜ್ಯಗಳಿಂದ ಜನ ಬರುತ್ತಿದ್ದಾರೆ. ಕೊರೊನಾ ಸೋಂಕಿತ ಪ್ರದೇಶಗಳಾದ ಮಹಾರಾಷ್ಟ್ರ, ಗುಜರಾತ್, ತಮಿಳುನಾಡಿನಿಂದ ಜನ ನಗರಕ್ಕೆ ಬರುತ್ತಿದ್ದಾರೆ. ಹೀಗಾಗಿ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸ್ಫೋಟವಾಗಿದೆ. ಆದರೂ ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಾವು ಮಾದರಿಯಾಗಿದ್ದೇವೆ ಎಂದರು.ಕೊರೊನಾ ನಿಯಂತ್ರಣ ಕುರಿತು ಸೋಮವಾರ ಅಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ಸಭೆ ನಡೆಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. ಬೆಂಗಳೂರು ಮತ್ತೆ ಲಾಕ್ ಡೌನ್ ಮಾಡುವ ಕುರಿತು ಪ್ರತಿಕ್ರಿಯಿಸಿದ ಅವರು, ಮತ್ತೆ ಲಾಕ್‍ಡೌನ್ ಮಾಡುವುದಿಲ್ಲ, ಯಾವ ಪ್ರದೇಶದಲ್ಲಿ ಕೊರೊನಾ ಹೆಚ್ಚಿದೆಯೋ ಅಲ್ಲಿ ಸೀಲ್‍ಡೌನ್ ಮಾಡುತ್ತೇವೆ ಎಂದರು.Sign in to your account
Username or Email Address


Password

 Remember Me


